Home ರಾಜಕೀಯ ಸಮಾಚಾರ ಮಹಾರಾಷ್ಟ್ರ ಜಾರ್ಖಂಡ್ ವಿಧಾನ ಸಭಾ ಚುನಾವಣೆ ದಿನಾಂಕ ಪ್ರಕಟ

ಮಹಾರಾಷ್ಟ್ರ ಜಾರ್ಖಂಡ್ ವಿಧಾನ ಸಭಾ ಚುನಾವಣೆ ದಿನಾಂಕ ಪ್ರಕಟ

0

ಹೊಸದಿಲ್ಲಿ: ಭಾರತೀಯ ಚುನಾವಣಾ ಆಯೋಗವು ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ನ.20 ರಂದು ಮತದಾನ ನಡೆಯಲಿದೆ.

ಜಾರ್ಖಂಡ್ ನಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲನೆ ಹಂತ ನ.13 ರಂದು ಮತ್ತು ಎರಡನೇ ಹಂತವು ನ.20 ರಂದು ಎರಡನೇ ಹಂತದ ಮತದಾನ ನಡೆಯಲಿದೆ.

ನ.23 ರಂದು ಮತಎಣಿಕೆ ನಡೆಯಲಿದೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದ್ದು, 81 ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್ ವಿಧಾನಸಭೆಯು 2025ರ ಜನವರಿ 5ರಂದು ತನ್ನ ಅವಧಿಯನ್ನು ಪೂರ್ಣಗೊಳಿಸಲಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version