ಬೆಳ್ತಂಗಡಿ; ವೇಣೂರಿನಲ್ಲಿ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯನ್ನು ಬೈಕ್ ನಲ್ಲಿ ಹಿಂಬಾಲಿಸಿ ತೊಂದರೆ ನೀಡಿದ ಘಟನೆ ಸಂಭವಿಸಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದ ಆರೋಪಿ ಜುಮಾರ್ (24) ಎಂಬಾತನಾಗಿದ್ದಾನೆ ಈತ ಕಳೆದ ಕೆಲವು ದಿನಗಳಿಂದ ಅಪ್ರಾಪ್ತ ವಯಸ್ಸಿನ ಬಾಲಕಿ ಕಾಲೇಜಿಗೆ ಹೋಗುವ ಸಂದರ್ಭದಲ್ಲಿ ರಸ್ತೆಯಲ್ಲಿ ತನ್ನ ಬೈಕ್ ನಲ್ಲಿ ಬಂದು ಬಾಲಕಿಯನ್ನು ಹಿಂಬಾಲಿಸಿ ಬೈಕ್ ನಲ್ಲಿ ಬರುತ್ತೀಯಾ ನಂಬರ್ ಕೊಡಿ ಎಂದು ಕೇಳುತ್ತಾ ತೊಂದರೆ ನೀಡಿದ್ದು ಈ ಬಗ್ಗೆ ನೊಂದ ಬಾಲಕಿ ವೇಣೂರು ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಘಟನೆಯ ಬಗ್ಗೆ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.