Home ರಾಜಕೀಯ ಸಮಾಚಾರ ಅ 31 ಬೆಳ್ತಂಗಡಿಯಲ್ಲಿ ದೋಸೆ ಹಬ್ಬ: ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವ ಭಾವಿ...

ಅ 31 ಬೆಳ್ತಂಗಡಿಯಲ್ಲಿ ದೋಸೆ ಹಬ್ಬ: ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವ ಭಾವಿ ಸಭೆ

42
0

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 31 ಗುರುವಾರ ದಂದು ನಡೆಯುವ5 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2024 ಇದರ ಪೂರ್ವಭಾವಿ ಸಭೆಯೂ ಪಕ್ಷದ ಕಚೇರಿಯಲ್ಲಿ ನಡೆಯಿತು.
ಶಾಸಕರಾದ ಹರೀಶ್ ಪೂಂಜಾರವರು ಕಾರ್ಯಕ್ರಮದ ರೂಪುರೇಷೆ, ಜವಾಬ್ದಾರಿ ಹಂಚಿಕೆ, ವಿವಿಧ ಕಾರ್ಯಕ್ರಮ ಆಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾದ ಜಯಪ್ರಸಾದ್ ಕಡಮ್ಮಾಜೆ ಮೊಗ್ರು, ವಿನಿತ್ ಸಾವ್ಯ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ಮಹಿಳಾ ಮೋರ್ಚಾ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಪೂರ್ಣಿಮಾ ಮುಂಡಾಜೆ, ತುಳಸಿ ಮಾಲಾಡಿ
ಹಾಗೂ ಯುವಮೋರ್ಚಾ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here