
ಬೆಳ್ತಂಗಡಿ; ತಾಲೂಕಿನಲ್ಲಿ ತೆರವಾಗಿರುವ ಮೂರು ಗ್ರಮಾಪಂಚಾಯತು ಕ್ಷೇತ್ರಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ.
ತಾಲೂಕಿನ ಉಜಿರೆ ಗ್ರಾಮದ1, ಕುವೆಟ್ಟು ಗ್ರಾಮದ 1, ಹಾಗೂ ಇಳಂತಿಲ ಗ್ರಾಮದ1 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ನ 6ರಂದು ಜಿಲ್ಲಾಧಿಕಾರಿಯವರು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ನ 12 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ, ನ13ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ, ನ15ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ, ನ 23ರಂದು ಬೆಳಗ್ಗೆ 7 ರಿಂದ ಸಂಜೆ 5 ರ ವರೆಗೆ ಚುನಾವಣೆನಡೆಯಲಿದೆ ನ 26ರ.ದು ಬೆಳ್ತಂಗಡಿ ಯಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಲಿದೆ.
