Home ಅಪರಾಧ ಲೋಕ ವಿಷ ಸೇವಿಸಿ ವಿದ್ಯಾರ್ಥಿ ನಿ ಆತ್ಮಹತ್ಯೆ

ವಿಷ ಸೇವಿಸಿ ವಿದ್ಯಾರ್ಥಿ ನಿ ಆತ್ಮಹತ್ಯೆ

0

ಬೆಳ್ತಂಗಡಿ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಕೊಕ್ಕಡದಲ್ಲಿ ನಡೆದಿದೆ.

ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ – ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ’ಸೋಜ(19) ಮೃತಪಟ್ಟ ಯುವತಿ.

ಪ್ರಿಯಾಂಕ 8 ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ನ.5ರಂದು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ವೆಸ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

ಈಕೆ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version