ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕಿಂಜೆ ಎಂಬಲ್ಲಿ ರಸ್ತೆಯ ಮಧ್ಯೆ ಲಾರಿ ಕೆಟ್ಟು ನಿಂತ ಕಾರಣ ಬುಧವಾರ ಮಧ್ಯಾಹ್ನ ಒಂದು ಗಂಟೆಗಿಂತ ಅಧಿಕಕಾಲ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಯಿತು.
ಸ್ಥಳೀಯರು ಲಾರಿಯನ್ನು ರಸ್ತೆಯಿಂದ ಸ್ಥಳಾಂತರಿಸಲು ಸಹಕರಿಸಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿಕೊಟ್ಟರು.