
ಬೆಳ್ತಂಗಡಿ: ತುಮಕೂರಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ 110 ಮೀಟರ್ ಹರ್ಡಲ್ಸ್ ನಲ್ಲಿ ನಲ್ಲಿ ಚಿನ್ನದ ಪದಕವನ್ನು ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಮುಂಡಾಜೆ ನಿವಾಸಿಯಾದ ತೇಜಲ್ ಕೆ.ಆರ್ ಇವರು ಆಯ್ಕೆಯಾಗಿರುತ್ತಾರೆ.
ಇವರು ಈವರೆಗೆ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಹಲವುಬಾರಿ ಚಿನ್ನ ಹಾಗೂ ಬೆಳ್ಳಿಯ ಪದಕಗಳನ್ನು ಪಡೆದು ಗ್ರಾಮೀಣ ಜನರಿಗೆ ಸ್ಪೂರ್ತಿ ನೀಡುತ್ತಿರುವ ಉತ್ತಮ ಪ್ರತಿಭೆ ಆಗಿರುತ್ತಾರೆ.

ಒಡಿಸ್ಸಾದ ಭುವನೇಶ್ವರದಲ್ಲಿ ನಡೆಯುವ 39 ನೆಯ ಕಿರಿಯರ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೂ ಈಗಾಗಲೇ ಆಯ್ಕೆಯಾಗಿರುವ ಇವರು ಮುಂಬರುವ ದಿನಗಳಲ್ಲಿ 2 ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.
ಇವರು ಮುಂಡಾಜೆ ನಿವಾಸಿಯಾದ ರಾಜೇಶ್ ಕೆ.ವಿ ಹಾಗೂ ಜಿನ್ಸಿ ರಾಜೇಶ್ ಇವರ ಪುತ್ರನಾಗಿರುತ್ತಾರೆ. ಇವರು ಆಳ್ವಾಸ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿ ಆಗಿದ್ದು ತರಬೇತುದಾರರಾದ ಶಾಂತರಾಮ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ