ಬೆಳ್ತಂಗಡಿ:ಉಜಿರೆಯಿಂದ ಧರ್ಮಸ್ಥಳ ಕಡೆಗೆ ಸಂಚರಿಸುತ್ತಿದ್ದ ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಡಿವೈಡರ್ ಮೇಲೇರಿ ನಿಂತ ಘಟನೆ ಉಜಿರೆ ಕಾಲೇಜು ರಸ್ತೆಯಲ್ಲಿ ಭಾನುವಾರ ನಡೆದಿದೆ.
ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಡಿವೈಡರ್ ನಲ್ಲಿ ಅಳವಡಿಸಲಾಗಿದ್ದ ಬೀದಿ ದೀಪಗಳ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಲಾರಿಯಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.