ನೆಲ್ಯಾಡಿ : ನೆಲ್ಯಾಡಿ ಸಮೀಪ ಭೀಕರ ಕಾರು ಅಪಘಾತ ಸಂಭವಿಸಿ ಪುತ್ತೂರು ಕುಂಬ್ರ ಮೂಲದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಸೇತುವೆಯಲ್ಲಿ ನಡೆದಿದೆ.
ಭಾನುವಾರ ಸಂಜೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟಿದ್ದಾರೆ. ಮೃತರು ಕುಂಬ್ರ ನಿವಾಸಿ ಎನ್ನಲಾಗಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.
