Home ಸ್ಥಳೀಯ ಸಮಾಚಾರ ಗ್ರಾಮಾಭಿವೃದ್ದಿ ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿ ಮಹತ್ವದ ಪರಿವರ್ತನೆ; ದುಗ್ಗಪ್ಪ ಗೌಡ

ಗ್ರಾಮಾಭಿವೃದ್ದಿ ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿ ಮಹತ್ವದ ಪರಿವರ್ತನೆ; ದುಗ್ಗಪ್ಪ ಗೌಡ

0

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದಾಗಿ ಇಂದು ಗ್ರಾಮೀಣ ಪ್ರದೇಶಗಳಲ್ಲಿ ಮಹತ್ತರ ಪರಿವರ್ತನೆಯಾಗಿದ್ದು ಕಟ್ಟಕಡೇಯ ಕುಟುಂಬವೂ ಮುಖ್ಯವಾಹಿನಿಗೆ ಬರುವಂತಾಗಿದೆ ಎಂದು ಯೋಜನೆಯ ಉಡುಪಿ ಪ್ರಾದೇಶಿಕ ವಿಭಾಗದ ನಿರ್ದೇಶಕ ದುಗ್ಗೇ ಗೌಡ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.

ಗುಂಪಿನ ಮೂಲಕ ಉಳಿತಾಯದ ಮನೋಬಾವನೆ ಬೆಳೆದಿದೆ, ಗುಂಪುಗಳು ಮಿನಿ ಬ್ಯಾಂಕ್ ಗಳಾಗಿ ಪರಿವರ್ತನೆಯಾಗಿದೆ. ಬಡವರನ್ನು ಗುರುತಿಸಿ ಅವರಿಗೆ ಆರ್ಥಿಕ ಚೈತನ್ಯ ನೀಡುವ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಾಡುತ್ತಿದೆ ಎಂದರು.
ರೈತ ಬಂದು ಆಹಾರೋದ್ಯಮ ಪ್ರೈ. ಲಿ ಮಾರುತಿ ಪುರ ಮಾಲಕ ಶಿವ ಶಂಕರ್ ನಾಯಕ್ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ, ತಾಲೂಕಿನಲ್ಲಿ ಯೋಜನೆಯ ಆರಂಭದ ದಿನಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ಸಿಕ್ಕಿದ ಪರಿಣಾಮ ರೈತರ ಅಭಿವೃದ್ಧಿ ಯೊಂದಿಗೆ ಗ್ರಾಮದ ಅಭಿವೃದ್ಧಿ ಯಾಗಿದೆ ಎಂದು ಸ್ಮರಿಸಿದರು.

ಅಧ್ಯಕ್ಷತೆಯನ್ನು ರಾಮಣ್ಣ ಗೌಡ ವಲಯ ಅದ್ಯಕ್ಷರು ತಣ್ಣೀರು ಪಂಥ ವಲಯ ವಹಿಸಿದ್ದರು.
ವೇದಿಕೆಯಲ್ಲಿ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷ ಎಂ.ಎ ಕಾಸಿಂ ಮಲ್ಲಿಗೆಮನೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರಾ, ರಾಜೇಶ್ ಜೈನ್, ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪನಿ ಕಲ್ಲೇರಿ ಲಿಂಗಪ್ಪ ನಾಯ್ಕ, ಶ್ರೀರಾಮ ಶಾಲೆ ಉಪ್ಪಿಂಗಡಿ ಅಧ್ಯಕ್ಷ ಸುನಿಲ್ ಅಣವು , ತಣ್ಣೀರುಪಂಥ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ, ಕೃಷಿಕ ಪ್ರವೀಣ್ ರೈ ಕುಪ್ಪೆಟ್ಟಿ, ತಣ್ಣೀರುಪಂಥ ಗ್ರಾಮ ಪಂಚಾಯತ್ ಸದಸ್ಯ ಸಾಮ್ರಾಟ್ ಕರ್ಕೇರ, ಕಲ್ಲೇರಿ ಒಕ್ಕೂಟದ ನೂತನ ಅಧ್ಯಕ್ಷ ರವೀಂದ್ರ, ಕರಾಯ ಒಕ್ಕೂಟದ ನೂತನ ಅಧ್ಯಕ್ಷರಾದ ಶ್ರೀ ರಾಜಶೇಖರ ರೈ, ನಿಕಟ ಪೂರ್ವ ಅಧ್ಯಕ್ಷ ರಘರಾಮ ಶೆಟ್ಟಿ, ಕುಪ್ಪೆಟ್ಟಿ ಒಕ್ಕೂಟದ ನೂತನ ಅಧ್ಯಕ್ಷ ಡೀಕಯ್ಯ ಗೌಡ ಉಪಸ್ಥಿತರಿದ್ದರು.

ತಾಲೂಕು ಯೋಜನಾಧಿಕಾರಿ ದಯಾನಂದ ಪೂಜಾರಿ ಸ್ವಾಗತಿಸಿದರು. ವಲಯ ಮೇಲ್ವಿಚಾರಕ ಗುಣಕರ್ ನಿರೂಪಿಸಿದರು. ಕರಾಯ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಸುಜಾತಾ ವರದಿ ಮಂಡಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version