Home ಅಪರಾಧ ಲೋಕ ಕಾರ್ಕಳದಲ್ಲಿ ಎನ್ಕೌಂಟರ್; ನಕ್ಸಲ್ ನಾಯಕ್ ವಿಕ್ರಂ ಗೌಡ ಹತ್ಯೆ

ಕಾರ್ಕಳದಲ್ಲಿ ಎನ್ಕೌಂಟರ್; ನಕ್ಸಲ್ ನಾಯಕ್ ವಿಕ್ರಂ ಗೌಡ ಹತ್ಯೆ

0

ಕಾರ್ಕಳ: ಹೆಬ್ರಿ ಪರಿಸರದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಕರ್ನಾಟಕದ ನಕ್ಸಲ್ ಮುಖಂಡ ವಿಕ್ರಂ ಗೌಡನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ.
ಕಳೆದ‌ ಕೆಲ ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಕೂಂಬಿಂಗ್ ತೀವ್ರಗೊಳಿಸಿದ್ದ ಎಎನ್ಎಫ್ ನಿಂದ ನಕ್ಸಲ್ ನಾಯಕ ವಿಕ್ರಂ ಗೌಡ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.
ಹೆಬ್ರಿ ಪರಿಸರ ಕಬ್ಬಿನಾಲೆ, ಪೀತೆಬೈಲು ಪರಿಸರದಲ್ಲಿ ನಾಲ್ವರು ನಕ್ಸಲರು ಓಡಾಡುತ್ತಿದ್ದ ಮಾಹಿತಿ ಹಿನ್ನೆಲೆಯಲ್ಲಿ ಎಎನ್ ಎಫ್ ಕಾರ್ಯಾಚರಣೆ ನಡೆಸಿದ್ದು, ಈ‌ ನಡುವೆ ಎಎನ್ ಎಫ್, ನಕ್ಸಲರ‌ ನಡುವೆ ಮುಖಾಮುಖಿಯಾಗಿದ್ದು, ಗುಂಡಿನ ಚಕಮಕಿ ನಡೆದಿದೆ ಎನ್ನಲಾಗಿದೆ.
ನಕ್ಸಲ್ ನಾಯಕ ವಿಕ್ರಮ್ ಗೌಡನಿಗೆ ಗುಂಡು ತಗುಲಿದ್ದು, ಮೃತಪಟ್ಟಿದ್ದು, ಮೂವರು ಕಾಡಿನಲ್ಲಿ ತಲೆಮರೆಸಿಕೊಂಡಿದ್ದಾರೆ. ಕಾರ್ಕಳ, ಹೆಬ್ರಿ ಸಹಿತ
ವಿವಿಧ ಪಶ್ಚಿಮಘಟ್ಟ ಕಾಡಿನಲ್ಲಿ ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಂಡಿದೆ.
ಘಟನೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version