ಬೆಳ್ತಂಗಡಿ: ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಪತ್ರಕರ್ತ ಭುವನೇಂದ್ರ ಪುದುವೆಟ್ಟು (42) ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ವಿಜಯವಾಣಿ ಪತ್ರಿಕೆಯಲ್ಲಿ ಹಲವಾರು ವರ್ಷಗಳಿಂದ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದ ಇವರು ಕಳೆದ ಕೆಲ ತಿಂಗಳುಗಳಿಂದ ಬೆಳ್ತಂಗಡಿ ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದರು,ಭಾನುವಾರ ಅನಾರೋಗ್ಯ ಉಂಟಾದ ಕಾರಣ ಮೂಡಬಿದಿರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅಲ್ಲಿಂದ ಸೋಮವಾರ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅದರೆ ಇಂದು ಚಿಕಿತ್ಸೆ ಫಲಾಕಾರಿಯಾಗದೇ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ನಿವಾಸಿಯಾದ ಇವರು ಪತ್ನಿ ಇಬ್ಬರು ಪುಟ್ಟ ಮಕ್ಕಳು ಸೇರಿದಂತೆ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.