ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ (50) ಅಲ್ಪಕಾಲದ ಅಸೌಖ್ಯದ ಬಳಿಕ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಖ್ಯಾತ ವಾಲಿಬಾಲ್ ಆಟಗಾರರಾಗಿದ್ದ ಇವರು, ಕ್ರೀಡಾಪಟುವಾಗಿ ಜಿಲ್ಲಾ ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದರು.
ಮೃತರು ಪತ್ನಿ ಇಬ್ಬರು ಮಕ್ಕಳು ತಂದೆ ಸಹೋದರ ಸಹೋದರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.