Home ರಾಜಕೀಯ ಸಮಾಚಾರ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ವಕ್ಫ್ ಜಾಗೃತಿ ಸಭೆ ಕಾರ್ಯಕ್ರಮ

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ವಕ್ಫ್ ಜಾಗೃತಿ ಸಭೆ ಕಾರ್ಯಕ್ರಮ

0

ಬೆಳ್ತಂಗಡಿ; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ವಕ್ಫ್ ಜಾಗೃತಿ ಸಭೆ ಕಾರ್ಯಕ್ರಮವು ಕ್ಷೇತ್ರಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ಶಾದಿ ಮಹಲ್ ಗುರುವಾಯನಕೆರೆಯಲ್ಲಿ ಶುಕ್ರವಾರ ನಡೆಯಿತು.
ಕೇಂದ್ರ ಸರಕಾರ ಜಾರಿಗೊಳಿಸಲು ಉದ್ದೇಶಿಸಿರುವ ಕರಾಳವಾದ ಹೊಸ ವಕ್ಫ್ ತಿದ್ದುಪಡಿ ಮಸೂದೆ ಕುರಿತು ಸಮುದಾಯದ ನಾಯಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ವಕ್ಫ್ ಜಾಗೃತಿ ಸಭೆ ಹಮ್ಮಿಕೊಳ್ಳಲಾಗಿತ್ತು.ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಮಹಮ್ಮದ್ ಇಲ್ಯಾಸ್ ತುಂಬೆ ಮಾತನಾಡಿ ಧಾರ್ಮಿಕ ಕಾರ್ಯಕ್ಕೆ, ದಾನ ಅಥವಾ ಪರೋಪಕಾರಿ ಉದ್ದೇಶಕ್ಕಾಗಿ ಶಾಶ್ವತವಾಗಿ ಕೊಟ್ಟಿರುವ ಆಸ್ತಿಯೇ ವಕ್ಫ್ ಆಸ್ತಿ. ಇದು ದತ್ತಿಯಾಗಿರುತ್ತದೆ. ಒಮ್ಮೆ ವಕ್ಫ್ ಆಸ್ತಿಯೆಂದು ಘೋಷಿತವಾದ ಆಸ್ತಿಗಳು ಶಾಶ್ವತವಾಗಿ ವಕ್ಫ್ ಆಸ್ತಿಯಾಗಿಯೇ ಉಳಿಯುತ್ತವೆ. ರಾಜ್ಯದಲ್ಲಿ ವಕ್ಫ್ ಆಸ್ತಿ ವಿಚಾರದಲ್ಲಿ ರೈತರು ಮತ್ತು ಮುಸ್ಲಿಮರ ನಡುವೆ ಉಂಟಾಗಿರುವ ಆತಂಕವನ್ನು ಸೌಹಾದರ್ತೆಯಿಂದ ತಿಳಿಗೊಳಿಸಬೇಕು. ಅದನ್ನು ಬಿಟ್ಟು ಬಿಜೆಪಿ ಇದಕ್ಕೆ ಕೋಮು ಬಣ್ಣ ಹಚ್ಚಿ ರಾಜಕೀಯ ಮಾಡುತ್ತಿದೆ ಎಂದು ಹರಿಹಾಯ್ದರು. ದೇಶದಲ್ಲಿ ಅತೀ ಹೆಚ್ಚು ವಕ್ಫ್ ಸೊತ್ತುಗಳಿದ್ದು, ಯಾರೂ ಮಾರಾಟ ಮಾಡುವಂತಿಲ್ಲ. ಈ ಬಗ್ಗೆ ಎಲ್ಲರೂ ಅರಿವು ಪಡೆದುಕೊಳ್ಳಬೇಕು ಎಂದರು.


ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್, ಗುರುವಾಯನಕೆರೆ ಜುಮ್ಮಾ ಮಸೀದಿ ಅಧ್ಯಕ್ಷರಾದ ಅಬ್ದುಲ್ ಲತೀಫ್ ಎಸ್.ಎಂ.ಎಸ್ ಆಗಮಿಸಿದ್ದರು. ಜಿಲ್ಲಾ ಸಮಿತಿ ಸದಸ್ಯರಾದ ನವಾಝ್ ಕಟ್ಟೆ ಸ್ವಾಗತಿಸಿದರು. ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರುರವರು ಪ್ರಸ್ತಾವಿಕ ಮಾತನಾಡಿದರು.

ಬೆಳ್ತಂಗಡಿವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರು ಅಧ್ಯಕ್ಷಿಯ ಮಾತುಗಳನ್ನಾಡಿದರು. ಬೆಳ್ತಂಗಡಿ ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಪಾಲ್ಗೊಂಡಿದ್ದರು.


ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ನಿಸಾರ್ ಕುದ್ರಡ್ಕ, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಜೊತೆ ಕಾರ್ಯದರ್ಶಿ ರಶೀದ್ ಬೆಳ್ತಂಗಡಿ, ಕೋಶಾಧಿಕಾರಿಗಳಾದ ಸ್ವಾಲಿ ಮದ್ದಡ್ಕ, ಹನೀಫ್ ಪುಂಜಾಲಕಟ್ಟೆ, ಸಹಲ್ ನಿರ್ಸಾಲ್, ಬ್ಲಾಕ್ ನಾಯಕರು, ಬ್ರಾಂಚ್ ನಾಯಕರು, ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version