Home ಅಂಕಣಗಳು ಲಕ್ಷದೀಪೋತ್ಸವದ ಅಂಗವಾಗಿ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ, ಸಹಸ್ರಾರು ಭಕ್ತರು ಭಾಗಿ

ಲಕ್ಷದೀಪೋತ್ಸವದ ಅಂಗವಾಗಿ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ, ಸಹಸ್ರಾರು ಭಕ್ತರು ಭಾಗಿ

0

ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನ ದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ವರೆಗೆ ಭಕ್ತರ ಪಾದಯಾತ್ರೆ ನಡೆಯಿತು.
ತಾಕೂಕಿನ ವಿವಿಧ ಭಾಗಗಳಿಂದ ಹಾಗೂ ಇತರ ಪ್ರದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪಾದಯಾತ್ರೆಯಲ್ಲಿ ಭಾಗಿಗಳಾದರು.
ಧರ್ಮಸ್ಥಳದಲ್ಲಿ ಪಾದಯಾತ್ರಿಗಳನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರದಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ ಈ ಯೋಜನೆಗಳು ಗ್ರಾಮೀಣ ಪ್ರದೇಶದ ಮನೆಗಳನ್ನು ಬೆಳಗಿದೆ ಎಂಬ ಸಾರ್ಥಕತೆ ಇದೆ. ಈ ಸೇವೆ ಇನ್ನಷ್ಟು ಮುಂದುವರಿಯಲಿದೆ. ಕಷ್ಟ ಸುಖ ಗಳನ್ನು ಸಮಾನತೆಯಿಂದ ಸ್ವೀಕರಿಸುತ್ತಿದ್ದೇನೆ, ಕ್ಷೇತ್ರದ ಕಾರ್ಯಗಳ ಬಗೆಗಿನ ಅಪ ಪ್ರಚಾರಗಳ ಬಗ್ಗೆ ಗಮನಹರಿಸುವುದಿಲ್ಲ. ಕ್ಷೇತ್ರದ ಸೇವೆ ನಿರಂತರವಾಗಿ ಮುಂದುವರಿಯುತ್ತದೆ ಎಂದರು.
2025 ರ ಜನವರಿ 7 ಮತ್ತು 8 ರಂದು ಮಾನ್ಯ ಉಪರಾಷ್ಟ್ರ ಪತಿಗಳನ್ನು ಧರ್ಮಸ್ಥಳಕ್ಕೆ ಆಹ್ವಾನಿಸಿದ್ದು ನೂತನ ಸರತಿ ಸಾಲಿನ (ಕ್ಯೂ ಕಾಂಪ್ಲೆಕ್ಸ್) ಕಟ್ಟಡವನ್ನು ಉದ್ಘಾಟಿಸುವರು. ಅಂದು 60 ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಗುವುದು ಎಂದು ತಿಳಿಸಿದರು.


ಶಾಸಕ ಹರೀಶ್ವಪೂಂಜ ಮಾತನಾಡಿ ಶುಭ ಹಾರೈಸಿದರು, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು, ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮುಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಧನಂಜಯ ರಾವ್ ಸ್ವಾಗತಿಸಿದರು,
ಶ್ರೀನಿವಾಸ ರಾವ್ ಕಾರ್ಯಕ್ರಮ ನಿರೂಪಿಸಿದರು

NO COMMENTS

LEAVE A REPLY

Please enter your comment!
Please enter your name here

Exit mobile version