ಬೆಳ್ತಂಗಡಿ; ಜಿಲ್ಲೆಯ ಮೂಲನಿವಾಸಿವಾದಿವಾಸಿಗಳು ಹಕವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು ಈ ಬಗ್ಗೆ ಕೂಡಲೇ ಅಗತ್ಯ ಕ್ರಮ ಕೂಗೊಳ್ಳುವಂತೆ ರಾಜ್ಯ ಸರಕಾರದ ಗೃಹಸಚಿವರಾದ ಡಾ.ಜಿ ಪರಮೇಶ್ವರ್ ಅವರಿಗೆ ಆದಿವಾಸಿ ಹಕ್ಕುಗಳ ಸಮಿತಿ ಸಂಚಾಲಕ ಶೇಖರ ಲಾಯಿಲ ಅವರ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ಮನವಿ ಸಲ್ಲಿಸಲಾಯಿತು.
ಕುದುರೇಮುಖ ರಾಷ್ಟ್ರೀಯ ಉದ್ಯಾನವನದೊಳಗೆ ವಾಸಿಸುತ್ತಿರುವ ಮೂಲನಿವಾಸಿಗಳು ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿ ಬದುಕನ್ನು ನಡೆಸುತ್ತಿದ್ದಾರೆ ಈ ಕುಟುಂಬಗಳಿಗೆ ಕೂಡಲೇ ರಸ್ತೆ, ವಿದ್ಯುತ್, ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು,
ನೆರಿಯ ಗ್ರಾಮದ ಬಾಂಜಾರು ಮಲೆ ನುವಾಸಿಗಳ ಜಮೀನಿನ ಮೇಲೆ ನ್ಯಾಯಾಲಯದಲ್ಲಿ ಸರಕಾರ ಹಾಕಿರುವ ವ್ಯಾಜ್ಯವನ್ನು ಹಿಂಪಡೆಯಬೇಕು, ತಾಲೂಕಿನಲ್ಲಿ ಆದಿವಾಸಿಗಳು ವಾಸಿಸುತ್ತಿರುವ ಪ್ರದೇಶಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು, ಕಸ್ತೂರಿ ರಂಗನ್ ವರದಿಯ ಬಗ್ಗೆ ಜನರಲ್ಲಿ ಭಯ ಮೂಡಿದೆ, ಕಸ್ತೂರಿ ವರಂಗನ್ ವರದಿಯನ್ನು ಸರಕಾರ ತಿರಸ್ಕರಿಸಬೇಕು ಹಾಗೂ ಜನರಲ್ಲಿನ ಭಯ ಹೋಗಲಾಡಿಸಲು ಕ್ರಮ ಕೈಗೊಳ್ಳಬೇಕೆ ಹೀಗೆ ವಿವಿದ ಬೇಡಿಕೆಗಳನ್ನು ಈಡೇರಿಸುವಂತೆನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕಾಂಗ್ರೆಸ್ ಎಸ್.ಟಿ ಘಟಕದ ತಾಲೂಕು ಅಧ್ಯಕ್ಷ ಜಯಾನಂದ ಪಿಲಿಕಳ ಹಾಗೂ ಇತರರು ಇದ್ದರು.