Home ರಾಜಕೀಯ ಸಮಾಚಾರ ಪುದುವೆಟ್ಟು; ಗ್ರಾ.ಪಂ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಪಾಸ್, ಅಧಿಕಾರ‌ ಕಳೆದುಕೊಂಡ ಅಧ್ಯಕ್ಷರು

ಪುದುವೆಟ್ಟು; ಗ್ರಾ.ಪಂ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಪಾಸ್, ಅಧಿಕಾರ‌ ಕಳೆದುಕೊಂಡ ಅಧ್ಯಕ್ಷರು

48
0

ಬೆಳ್ತಂಗಡಿ: ಪುದುವೆಟ್ಟು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಅನಿತಾ ಕುಮಾರಿರವರ ವಿರುದ್ಧ ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿಯಾಗಿದ್ದು, ಅಧ್ಯಕ್ಷರು ಅಧಿಕಾರ ಕಳೆದುಕೊಂಡಿದ್ದಾರೆ. ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತರ ಆಡಳಿತವಿದ್ದು, ಅಧ್ಯಕ್ಷರಾಗಿ ಅನಿತಾ ಕುಮಾರಿ ಕಳೆದ ಒಂದೂವರೆ ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.
ಆದರೆ ಇತ್ತಿಚೀನ ದಿನಗಳಲ್ಲಿ ನಡೆದ ಕೆಲವೊಂದು ಬೆಳವಣಿಗೆಯಲ್ಲಿ ಅಧ್ಯಕ್ಷರ ವಿರುದ್ಧ ಅವರದೇ ಪಕ್ಷ ಬೆಂಬಲಿತ ಸದಸ್ಯರು ಅಸಮಾಧಾನಗೊಂಡು, ಅಧ್ಯಕ್ಷರ ಪದಚ್ಯುತಿಗೆ ನ. 20 ರಂದು ಪುತ್ತೂರು ಎ. ಸಿ ಯವರಿಗೆ ಅವಿಶ್ವಾಸ ಸೂಚನಾ ಪತ್ರ ಸಲ್ಲಿಸಿದ್ದರು

ಡಿ. 12 ರಂದು ಬೆಳಿಗ್ಗೆ ಪುತ್ತೂರು ಸಹಾಯಕ ಕಮೀಷನರ್ ಉಪಸ್ಥಿತಿಯಲ್ಲಿ ಅವಿಶ್ವಾಸ ಸೂಚನೆ ನಿರ್ಣಯ ಸಭೆ ನಡೆಯಿತು. ಅಧ್ಯಕ್ಷರ ವಿರುದ್ಧ 7 ಮಂದಿ ಹಾಗೂ ಅಧ್ಯಕ್ಷರ ಪರ ಒಬ್ಬರು ಕೈ ಎತ್ತಿ ಬೆಂಬಲ ಸೂಚಿಸಿದರು. ಇದರಿಂದಾಗಿ ಅವಿಶ್ವಾಸ ನಿರ್ಣಯ ಮಂಜೂರಾಗಿದ್ದು ಅವರು ಅಧಿಕಾರ ಕಳೆದುಕೊಂಡಿದ್ದಾರೆ. ಉಪಾಧ್ಯಕ್ಷ ಸ್ಥಾನದಲ್ಲಿದ್ದ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

LEAVE A REPLY

Please enter your comment!
Please enter your name here