Home ಅಪರಾಧ ಲೋಕ ಮಾಲಾಡಿ; ಪಿಕಪ್ ಕಳ್ಳತನ ಪ್ರಕರಣ ಪತ್ತೆಹಚ್ಚಿದ ಪೊಲೀಸರು; ಇಬ್ಬರ ಬಂಧನ ಪಿಕಪ್ ವಶಕ್ಕೆ

ಮಾಲಾಡಿ; ಪಿಕಪ್ ಕಳ್ಳತನ ಪ್ರಕರಣ ಪತ್ತೆಹಚ್ಚಿದ ಪೊಲೀಸರು; ಇಬ್ಬರ ಬಂಧನ ಪಿಕಪ್ ವಶಕ್ಕೆ

0

ಬೆಳ್ತಂಗಡಿ; ಮಾಲಾಡಿಯಲ್ಲಿ ಇಂಟರ್ ಲಾಕ್ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಪಿಕಪ್ ವಾಹನ ಕಳ್ಳತನ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೂಂಜಾಲಕಟ್ಟೆ ಪೊಲೀಸರು ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ
ಬಂಧಿತ ಆರೋಪಿಗಳು ಬಾಗಲಕೋಟೆ ಜಿಲ್ಲೆಯವರಾದ ಕನಕಪ್ಪ ಯಮನಪ್ಪ ಕ್ಯಾದಗೇರಿ(24) ಹಾಗೂ ರಮೇಶ್ ಚೌಹಾಣ್ (26) ಎಂಬವರಾಗಿದ್ದಾರೆ.
ಮಾಲಾಡಿ ಗ್ರಮದ ಅರ್ತಿಲ ಎಂಬಲ್ಲಿ ಟೆರೆನ್ಸ್ ಜೋಶಲ್ ವೇಗಸ್ ಎಂಬವರಿಗೆ ಸೇರಿದ ಇಂಟರ್ ಲಾಕ್ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಪಿಕಪ್ ವಾಹನವನ್ನು ಡಿ.2ರಂದು ರಾತ್ರಿ ಕಳ್ಳತನ ಮಾಡಲಾಗಿತ್ತು.
ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದರು.

ಇದೀಗ ಇಬ್ಬರು ಆರೋಪಿಗಳನ್ನು ಬಾಗಲಕೋಟೆಯಲ್ಲಿ ಬಂಧಿಸಿರುವ ಪೊಲೀಸರು ಮೂರು ಲಕ್ಷ ಮೌಲ್ಯದ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.


ಸದ್ರಿ ಪ್ರಕರಣದ ಪತ್ತೆ ಕಾರ್ಯದಲ್ಲಿ ದ.ಕ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಯತೀಶ್‌ ಎನ್‌, ಐ.ಪಿ.ಎಸ್‌ ಮತ್ತು ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ರಾಜೇಂದ್ರ ಡಿ.ಎಸ್ ರವರ ನಿರ್ದೇಶನದಂತೆ, ಬಂಟ್ವಾಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ವಿಜಯ ಪ್ರಸಾದ್ ರವರ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ನಾಗೇಶ್‌ ಕದ್ರಿ ರವರ ನೇತೃತ್ವದಲ್ಲಿ, ಪುಂಜಾಲಕಟ್ಟೆ ಪೊಲೀಸ್ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ನಂದ ಕುಮಾರ್‌ ಎಂ.ಎಂ (ಕಾ&ಸು) & ಓಮನ ಎನ್.ಕೆ (ತನಿಖೆ) ರವರ ಜೊತೆಗೆ ಸಿಬ್ಬಂದಿಗಳಾದ ಸಂದೀಪ್‌ ಎಸ್‌, ರಾಹುಲ್‌ ರಾವ್‌, ರಜಿತ್‌, ಸಲೀಂ ಪಟೇಲ್‌, ಪ್ರಕಾಶ್‌, ರಮ್ಯ ವೇಣೂರು ಠಾಣಾ ಸಿಬ್ಬಂದಿ ಬಸವರಾಜ್ ಹಾಗೂ ಗಣಕಯಂತ್ರ ವಿಭಾಗದ ಸಿಬ್ಬಂದಿಗಳಾದ ಸಂಪತ್‌ ಮತ್ತು ದಿವಾಕರ ರವರು ಕಾರ್ಯನಿರ್ವಹಿಸಿರುತ್ತಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version