Home ರಾಜಕೀಯ ಸಮಾಚಾರ ರಸ್ತೆ ದುರಸ್ಥಿ ಆಗ್ರಹಿಸಿ ಸರಳಿಕಟ್ಟೆಯಲ್ಲಿ ಎಸ್‌ಡಿಪಿಐ ಪ್ರತಿಭಟನೆ.

ರಸ್ತೆ ದುರಸ್ಥಿ ಆಗ್ರಹಿಸಿ ಸರಳಿಕಟ್ಟೆಯಲ್ಲಿ ಎಸ್‌ಡಿಪಿಐ ಪ್ರತಿಭಟನೆ.

9
0

ಬೆಳ್ತಂಗಡಿ; ತಾಲೂಕಿನ ತೆಕ್ಕಾರು ಗ್ರಾಮದ ಗೋದಾಮುಗುಡ್ಡೆ – ಗೋವಿಂದರಗುಳಿ – ಸರಳಿಕಟ್ಟೆ ರಸ್ತೆ ಮತ್ತು ಬಾಜಾರದಿಂದ ಜೋಡುಕಟ್ಟೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು
ರಸ್ತೆ ದುರಸ್ಥಿ ಆಗ್ರಹಿಸಿ ಎಸ್‌ಡಿಪಿಐ ತೆಕ್ಕಾರು ಗ್ರಾಮ ಸಮಿತಿ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.
ಈ ಪ್ರದೇಶದ ರಸ್ತೆಗಳು ಹಲವಾರು ವರ್ಷಗಳಿಂದ ದುರಸ್ತಿ ಕಾಣದೆ ಸಂಚಾರಕ್ಕೆ ಯೋಗ್ಯವಿಲ್ಲದ ರಸ್ತೆಯಂತಾಗಿದ್ದು,
ಸ್ಥಳೀಯರು ರಸ್ತೆ ದುರಸ್ಥಿಗೆ ಆಗ್ರಹಿಸಿ ಸ್ಥಳೀಯ ಆಡಳಿತಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನಗಳು ಆಗಿಲ್ಲ, ಸ್ಥಳೀಯ ಶಾಸಕರಂತು ಈ ಭಾಗದಲ್ಲಿ ಯಾವುದೇ ಕಾಮಗಾರಿಗಳಿಗೆ ಅನುದಾನಗಳನ್ನು ಒದಗಿಸುತ್ತಿಲ್ಲ ಎಂದು ಸರಳಿಕಟ್ಟೆ ಜಂಕ್ಷನ್ ನಲ್ಲಿ ಪ್ರತಿಭಟನೆಯನ್ನು ಮಾಡಲಾಯಿತು.


ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್ ಜನ ಪ್ರತಿನಿಧಿಗಳಿಗೆ ಮತ್ತು ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ರತಿಭಟನೆಯ ದಾರಿಯನ್ನು ಹಿಡಿದಿದ್ದೇವೆ. ಒಂದು ತಿಂಗಳೊಳಗೆ ಕೆಲಸ ಆರಂಭವಾಗದಿದ್ದರೆ ತಾಲೂಕಿನ ಎಲ್ಲಾ ಕಾರ್ಯಕರ್ತರನ್ನು ಸೇರಿಸಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುವುದೆಂದು ಎಚ್ಚರಿಸಿದರು. ತೆಕ್ಕಾರು ಗ್ರಾಮ ಪಂಚಾಯತ್ ಗೆ ತೆರಳಿ ಪಂಚಾಯತ್ ಅಧಿಕಾರಿಗಳ ಮೂಲಕ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ಕಣಿಯೂರು ಬ್ಲಾಕ್ ಸಮಿತಿ ಅಧ್ಯಕ್ಷರಾದ ಮುಸ್ತಾಫ ಬಂಗೇರಕಟ್ಟೆ, ಉಪಾಧ್ಯಕ್ಷರಾದ ನಝೀರ್ ಬಜಾರ, ಕೋಶಾಧಿಕಾರಿ ಫೈಝಲ್ ಮೂರುಗೋಳಿ, ಬೂತಿನ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು. ಸಮ್ಮದ್ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here