ಬೆಳ್ತಂಗಡಿ : ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದಿಂದ ಅಜಿಕುರಿ ಹೋಗುವ ರಸ್ತೆಯು ಸಂಪೂರ್ಣ ಹದೆಗೆಟ್ಟಿದ್ದು, ರಸ್ತೆ ದುರಸ್ತಿ ಮಾಡುವಂತೆ ಒತ್ತಾಯಿಸಿ ರಸ್ತೆಯಲ್ಲಿ ಗಿಡಗಳನ್ನು ನೆಟ್ಟು ಸ್ಥಳೀಯರು ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ.
ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ಯಾವುದೇ ವಾಹನಗಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಪ್ರತಿ ನಿತ್ಯ ಶಾಲಾ ಕಾಲೇಜು ಮಕ್ಕಳು, ಸಾರ್ವಜನಿಕರು, ಪ್ರವಾಸಿಗರು ಸೇರಿದಂತೆ ನೂರಾರು ಜನರು ಸಂಚರಿಸುವ ಈ ರಸ್ತೆ ದುರಸ್ತಿಗೆ ಸ್ಥಳೀಯರು ಒತ್ತಾಯಿಸುತ್ತಾ ಬಂದಿದ್ದರೂ ರಸ್ತೆ ದುರಸ್ತಿಗೆ ಯಾರೂ ಮುಂದಾಗಿಲ್ಲ.
ರಸ್ತೆ ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ಪರಿಸರದ ನಾಗರಿಕರು ಬಾಳೆಗಿಡ, ಇತರ ಸಸಿಗಳನ್ನು ರಸ್ತೆ ಮಧ್ಯೆ ನೆಟ್ಟು ವಿನೂತನ ಮಾದರಿಯಲ್ಲಿ ಪ್ರತಿಭಟನೆ ನಡೆಸಿದರು.