Home ಅಪರಾಧ ಲೋಕ ಬೆಳ್ತಂಗಡಿ :ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ ವಾಣಿಜ್ಯ ತೆರಿಗೆ ಇಲಾಖೆ ಯಿಂದ ಲಾರಿ ವಶ

ಬೆಳ್ತಂಗಡಿ :ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ ವಾಣಿಜ್ಯ ತೆರಿಗೆ ಇಲಾಖೆ ಯಿಂದ ಲಾರಿ ವಶ

0
8


ಬೆಳ್ತಂಗಡಿ : ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೆ ಕಬ್ಬಿಣ ಸಾಗಿಸುತ್ತಿದ್ದ (ಗುಜರಿ) ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿದ್ದು, ಈ ವೇಳೆ ಲಾರಿ ಚಾಲಕ ಚಿಕ್ಕಮಗಳೂರಿನ ರಾಜು ಜಿ.ಎಂಬಾತ ವಾಹನ ಬಿಟ್ಟು ಪರಾರಿಯಾಗಿದ್ದು ವಾಹನವನ್ನು ಬೆಳ್ತಂಗಡಿ ಪೊಲೀಸರ ವಶಕ್ಕೆ ನೀಡಿದ್ದಾರೆ.
ಬೆಳ್ತಂಗಡಿ ನಗರದ ಹಳೆಪೇಟೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಲಾರಿಯಲ್ಲಿ ಕಬ್ಬಿಣದ ವಸ್ತುಗಳನ್ನು (ಗುಜರಿ) ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಸಾಗಿಸುತ್ತಿದ್ದಾಗ ಡಿ.16 ರಂದು ರಾತ್ರಿ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಅಯುಕ್ತ ಜಾರಿ-1 ಸತೀಶ್ ಬಟ್ವಾಡಿ ನೇತೃತ್ವದ ತಂಡ ಕರ್ತವ್ಯದಲ್ಲಿರುವಾಗ ತಡೆದು ನಿಲ್ಲಿಸಿ ಲಾರಿಯನ್ನು ತಪಾಸಣೆ ಮಾಡಿದಾಗ ದಾಖಲೆಗಳನ್ನು ನೀಡದೆ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಈ ವೇಳೆ ಸರಕಾರದ ಯಾವುದೇ ದಾಖಲೆಗಳು ಇಲ್ಲದೆ ಅಕ್ರಮ ಸಾಗಾಟ ಮಾಡಿರುವುದು ಪತ್ತೆಯಾಗಿರುತ್ತದೆ.
ಲಾರಿಯನ್ನು ಬೆಳ್ತಂಗಡಿ ಪೊಲೀಸರ ವಶಕ್ಕೆ ನೀಡಿ ವಾಹನದ ಮಾಲೀಕರಿಗೆ ನೋಟಿಸ್ ನೀಡಿದ್ದು,ಈ ಬಗ್ಗೆ ವಾಣಿಜ್ಯ ತೆರಿಗೆ ಅಧಿಕಾರಿಗಳು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

NO COMMENTS

LEAVE A REPLY

Please enter your comment!
Please enter your name here