ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಯಕ್ಷಗಾನ ಕಲಾವಿದರೊಬ್ಬರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಮಂಗಳವಾರ ಫರಂಗಿ ಪೇಟೆ ಸಮೀಪ ಅರ್ಕುಳದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮುಂಡೂರು ಪರಂಬುಡೆ ನಿವಾಸಿ ಶೇಖರ ಆಚಾರ್ಯ ಪುತ್ರ ಸಸಿಹಿತ್ತು ಮೇಳದ ಕಲಾವಿದ, ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಯಾಗಿರುವ ಪುನೀತ್ (22) ಸಾವನ್ನಪ್ಪಿದ ಯುವಕನಾಗಿದ್ದಾನೆ. ಫರಂಗಿಪೇಟೆ ಸಮೀಪದ ಅರ್ಕುಳ ಎಂಬಲ್ಲಿ ಬೈಕಿಗೆ ಲಾರಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
