ಬೆಳ್ತಂಗಡಿ; ಚಾರ್ಮಾಡಿ ಮೃತ್ಯುಂಜಯ ನದಿಯಲ್ಲಿ ದನದ ಮಾಂಸದ ತ್ಯಾಜ್ಯಗಳನ್ನು ಎಸೆದ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಗಳು ಚಾರ್ಮಾಡಿ ಗ್ರಾಮದ ಕತ್ರಿಗುಡ್ಡೆ ನಿವಾಸಿ ಮೊಹಮ್ಮದ್ ಇರ್ಷಾದ್ (28) ಹಾಗೂ ಕುವೆಟ್ಟು ಗ್ರಾಮದ ಸುನ್ನತ್ ಕೆರೆ ನಿವಾಸಿ ಮಹಮ್ಮದ್ ಅಜ್ಮಲ್ (30) ಎಂಬವರಾಗಿದ್ದಾರೆ.
ಧರ್ಮಸ್ಥಳ ಠಾಣೆ ವ್ಯಾಪ್ತಿಯ ಚಾರ್ಮಾಡಿ ಗ್ರಾಮದ ಅನ್ನಾರು ಎಂಬಲ್ಲಿ ಜ 17ರಂದು ಸೇತುವೆಯ ಕೆಳ ಭಾಗದಲ್ಲಿ ಮೃತ್ಯುಂಜಯ ನದಿಯ ಬದಿಯಲ್ಲಿ ಕಿಡಿಗೇಡಿಗಳು ಹತ್ಯೆಗೈದ ಜಾನುವಾರುಗಳ ತಲೆ ಹಾಗೂ ಇತರೆ ತ್ಯಾಜ್ಯಗಳನ್ನು ಗೋಈ ಚೀಲಗಳಲ್ಲಿ ತುಂಬಿ ಎಸೆದು ಹೋಗಿದ್ದರು.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೋಸರು ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
