Home ಸ್ಥಳೀಯ ಸಮಾಚಾರ ಡಾ.ಗೋಪಾಲಕೃಷ್ಣ ಮತ್ತು ಡಾ ಭಾರತಿ ದಂಪತಿಗಳ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ...

ಡಾ.ಗೋಪಾಲಕೃಷ್ಣ ಮತ್ತು ಡಾ ಭಾರತಿ ದಂಪತಿಗಳ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

0


ಬೆಳ್ತಂಗಡಿ;  ಉಜಿರೆಯ ಬೆನಕ ಆಸ್ಪತ್ರೆಗೆ ದಿನಾಂಕ13.01.2025ರಂದು ಚಿತ್ತೈಸಿದ ಕುಕ್ಕೆ ಸುಬ್ರಮಣ್ಯ ಮಠದ  ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ನಂತರ ಆಶೀರ್ವಚನ ನೀಡುತ್ತಾ ಉಜಿರೆಯಂಥ ಸಣ್ಣ ಪ್ರದೇಶದಲ್ಲಿ ಕಳೆದ 25 ವರ್ಷಗಳಿಂದ ಅವಿರತ ಪರಿಶ್ರಮದಿಂದ ಸಕಲ ಸೌಲಭ್ಯಗಳನ್ನು ಒಳಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಪರಿವರ್ತಿಸಿರುವುದು ಅವರ ನಿರಂತರ ಸೇವೆಯ ದ್ಯೋತಕವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು ಮುಂದೆಯೂ ಇದೆ ರೀತಿ ನೆಡಿಸಿಕೊಂಡು ಪರಿಸರದ ಜನರಿಗೆ ಉತ್ತಮ ಆರೋಗ್ಯ ನೀಡಲು ಶ್ರೀ ಸುಬ್ರಮಣ್ಯನ ಅನುಗ್ರಹ ಸದಾ ಇರಲೆಂದು ಶುಭ ಹಾರೈಸಿದರು. ಇದಕ್ಕೂ ಮುನ್ನ ಆಸ್ಪತ್ರೆಯ ಪ್ರತಿ ವಿಭಾಗಕ್ಕೂ ಭೇಟಿ ನೀಡಿ ಆಸ್ಪತ್ರೆಯ ಸೌಲಭ್ಯಗಳನ್ನು ವೀಕ್ಷಿಸಿ ಪ್ರಶಂಸಿಸಿದರು.
ಶ್ರೀಗಳನ್ನು ಡಾ. ಗೋಪಾಲಕೃಷ್ಣ ಮತ್ತು ಭಾರತಿ ದಂಪತಿಗಳು ಪೂರ್ಣ ಕುಂಭ ಸ್ವಾಗತ ನೀಡಿ ಪಾದಪೂಜೆ ನೆರೆವೇರಿಸಿದರು. ಈ ಸಂದರ್ಭದಲ್ಲಿ ಶ್ರೀ ಸೀತಾರಾಮ್ ಭಟ್, ಡಾ. ಆದಿತ್ಯರಾವ್, ಡಾ. ಅಂಕಿತ ಜಿ ಭಟ್, ಡಾ. ರೋಹಿತ್ ಜಿ ಭಟ್ ಮತ್ತು ಕುಟುಂಬಸ್ಥರು ಹಾಗೂ ಆಸ್ಪತ್ರೆಯ ಸಿಬ್ಬಂಧಿಗಳು ಪಾಲ್ಗೊಂಡು ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು

NO COMMENTS

LEAVE A REPLY

Please enter your comment!
Please enter your name here

Exit mobile version