ಬೆಳ್ತಂಗಡಿ: ಮಾಲಾಡಿ ಗ್ರಾಮದ ಶಕ್ತಿನಗರ ಕೋಲ್ಪೆದಬೈಲ್ ನಿವಾಸಿ ನಾಗೇಶ್ ಕುಲಾಲ್( 33) ಎಂಬವರ ಮೃತದೇಹ ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಇವರು ಜ.13 ರಂದು ಬೆಳಗ್ಗೆ ಮನೆಯಲ್ಲಿ ಸಂಜೆ ಬರುತ್ತೇನೆ ಎಂದು ಹೇಳಿ ಹೋದವರು ಮನೆಗೆ ಹಿಂತಿರುಗಲಿಲ್ಲ ಇವರಿಗಾಗಿ ಎಲ್ಲೆಡೆ ಹುಡುಕಾಟ ನಡೆಸಲಾಗುತ್ತಿತ್ತು. ಜ14 ರಂದು ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ನಾಗೇಶ್ ಕುಲಾಲ್ ಅವರ ಮೃತದೇಹ ಪತ್ತೆಯಾಗಿದೆ,
ಧರ್ಮಸ್ಥಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಅಂದಾಜಿಸಲಾಗಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
