ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಕಟ್ಟದ ಬೈಲು ನಿವಾಸಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಮೃತ ವ್ಯಕ್ತಿ ಕಟ್ಟದ ಬಯಲು ನಿವಾಸಿ ಉಮೇಶ್ ಗುಡಿಗಾರ (42) ಎಂಬವರಾಗಿದ್ದಾರೆ.
ಮನೆಯ ಸಮೀಪವೇ ಇರುವ ಬಾವಿಯ ಅಡ್ಡಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಗುರುವಾರ ಉಮೇಶ್ ಅವರ ಮೃತದೇಹ ಪತ್ತೆ ಯಾಗಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಮೇಶ್ ವಿಪರೀತ ಕುಡಿತದ ಚಟ ಹೊಂದಿದ್ದ ಎನ್ನಲಾಗಿದ್ದು ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ
