
ಬೆಳ್ತಂಗಡಿ: ದ.ಕ ಜಿಲ್ಲಾ ಪಂಚಾಯತು, ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆ ತಾ.ಪಂ ಬೆಳ್ತಂಗಡಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇದರ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಮಚ್ಚಿನ ಇದರ 4ಕೋಟಿ ವೆಚ್ಚದ ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮ ಮಚ್ಚಿನದಲ್ಲಿ ನಡೆಯಿತು.
ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಶಂಕುಸ್ಥಾಪನೆ ನೆರವೇರಿಸಿದರು. ನೆರವೇರಿಸಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ವಹಿಸಿದ್ದರು, ವೇದಿಕೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಪುತ್ತೂರು ಸಹಾಯಕ ಕಮಿಷನರ್ ಜುಬಿನ್ ಮಹಾ ಪಾತ್ರ, ಮಚ್ಚಿನ ಗ್ರಾ.ಪಂ ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷೆ ಸೋಮವತಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಶೇಖರ ಕುಕ್ಕೇಡಿ, ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್ ಕೆ.ಪಿ.ಸಿ.ಸಿ ಸದಸ್ಯರಾದ ರಕ್ಷಿತ್ ಶಿವರಾಂ, ಪದ್ಮರಾಜ್, ಗ್ರಾ.ಪಂ ಸದಸ್ಯರುಗಳು, ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.
ಪ್ರಮೋದ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.


