Home ಸ್ಥಳೀಯ ಸಮಾಚಾರ ಕೋಟೆಕಾರು ಬ್ಯಾಂಕ್‌ ದರೋಡೆ; ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಕೋಟೆಕಾರು ಬ್ಯಾಂಕ್‌ ದರೋಡೆ; ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

26
0

ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್‌ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ.
ಈ ಬಗ್ಗೆ ಮಂಗಳೂರಿನಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಸೋಮವಾರ ಮಾಹಿತಿ ನೀಡಿದ್ದಾರೆ. ಮೂವರು ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದ್ದು, ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡ ನಂತರ ಹೆಚ್ಚಿನ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ಬಳಿ ಶಸ್ತ್ರಾಸ್ತ್ರಗಳು, ತಲವಾರು, ಪಿಸ್ತೂಲುಗಳು ಮತ್ತು ಇತರ ವಸ್ತುಗಳನ್ನು ಕೂಡ ವಶ ಪಡಿಸಿಕೊಂಡಿರುವ ಬಗ್ಗೆ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ರಾಜ್ಯದ ಅತಿದೊಡ್ಡ ದರೋಡೆ ಪ್ರಕರಣ ಭೇದಿಸಲು ಪೊಲೀಸರು ಭಾರೀ ಕಾರ್ಯಾಚರಣೆ ನಡೆಸಿದ್ದರು.
ದರೋಡೆ ಕೃತ್ಯಕ್ಕೆ ಬಳಸಿದ್ದ ಕಾರನ್ನು ಬೆನ್ನಟ್ಟಿ ಪೊಲೀಸ ತಂಡಗಳು ಕಾರ್ಯಾಚರಣೆಗೆ ಇಳಿದಿದ್ದವು.ದರೋಡೆ ನಡೆಸಿದ ಬಳಿಕ ತಲಪಾಡಿ ಟೋಲ್ ಮೂಲಕ ಕೇರಳಕ್ಕೆ ಪರಾರಿಯಾಗಿದ್ದರು.

LEAVE A REPLY

Please enter your comment!
Please enter your name here