Home ಅಪರಾಧ ಲೋಕ ವಿಟ್ಲ; ಇ.ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ, ಆರೋಪಿಗಳನ್ನು ಬಂಧಿಸಿದ ಪೊಲೀಸರು

ವಿಟ್ಲ; ಇ.ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ, ಆರೋಪಿಗಳನ್ನು ಬಂಧಿಸಿದ ಪೊಲೀಸರು

0

ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶೆ ಎಂಬಲ್ಲಿ ಉದ್ಯಮಿಯ ಮನೆಯಲ್ಲಿ ಇ.ಡಿ ಅಧಿಕಾರಿಗಳೆಂದು ಬಂದ ಆರು ಮಂದಿಯ ತಂಡ ಮನೆಯೊಳಗೆ ಶೋಧ ನಡೆಸಿ 30ಲಕ್ಷ ನಗದನ್ನು ದರೋಡೆ ಮಾಡಿದ ಪ್ರಕರಣವನ್ನು ಬೇಧಿಸಿದ ಪೊಲೀಸರು ಅಂತರ್ ರಾಜ್ಯ ದರೋಡೆಕೋರನನ್ನು ಬಂಧಿಸಿದ್ದು ಕಾರು ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿ ಕೇರಳದ ಕೊಲ್ಲಂ ಜಿಲ್ಲೆಯ ನಿವಾಸಿ ಅನಿಲ್ ಫೆರ್ನಾಂಡಿಸ್ (49) ಎಂಬಾತನಾಗಿದ್ದಾನೆ.

ಈತನಿಂದ ಕೃತ್ಯಕ್ಕೆ ಉಪಯೋಗಿಸಿದ ಕಾರು ಹಾಗೂ ರೂ 5 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡಿರುವ ಸೊತ್ತುಗಳ ಒಟ್ಟು ಮೌಲ್ಯ 11ಲಕ್ಷ ಎಂದು ಅಂದಾಜಿಸಲಾಗಿದೆ.
ಉಳಿದ ಆರೋಪಿಗಳು ತಲೆಮರೆಸಿಕೊಂಡಿದ್ದು ಅವರಿಗಾಗಿ ಹುಡುಕಾಟ ನಡಸುತ್ತಿದ್ದಾರೆ.
ಘಟನೆ ನಡೆದ ಬೆನ್ನಲ್ಲಿಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಮಾರ್ಗದರ್ಶನದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿತ್ತು

NO COMMENTS

LEAVE A REPLY

Please enter your comment!
Please enter your name here

Exit mobile version