Home ರಾಜಕೀಯ ಸಮಾಚಾರ ಇಂದಬೆಟ್ಟು: ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

ಇಂದಬೆಟ್ಟು: ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

23
0

ಬೆಳ್ತಂಗಡಿ; ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಶಿಬಿರವನ್ನು ಇಂದಬೆಟ್ಟಿನ ಸಂತ ಫ್ರಾನ್ಸಿಸ್ ಕ್ಲೀವಿಯ‌ರ್ ಚರ್ಚ್ ಸಭಾಂಗಣದಲ್ಲಿ ತಾಲೂಕು ಸಮಿತಿಯ ಅಧ್ಯಕ್ಷ ಬಿ ಪದ್ಮನಾಭ ಸಾಲ್ಯಾನ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರಕಾರದ ಈ ಮಹತ್ವದ ಯೋಜನೆಯನ್ನು ತಾಲೂಕಿನಲ್ಲಿ ಅತ್ಯಂತ ಉತ್ತಮವಾದ ರೀತಿಯಲ್ಲಿ ಅನುಷ್ಠಾನಕ್ಕೆ ತರಲಾಗಿದೆ. ವಿವಿಧ ಕಾರಣಗಳಿಂದಾಗಿ ಯೋಜನೆಯಿಂದ ವಂಚಿತರಾದವರಿಗೆ ಯೋಜನೆಯ ಪ್ರಯೋಜನ ತಲುಪಿಸುವ ಉದ್ದೇಶದಿಂದ ಈ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.
ಇಂದಬೆಟ್ಟು ಗ್ರಾಮ ಪಂಚಾಯತಿಯ ಅಧ್ಯಕ್ಷೆ ಆಶಾಲತರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಸದಸ್ಯ ಕಾರ್ಯದರ್ಶಿಯಾದ ಭವಾನಿಶಂಕರ್ ರವರು ಪ್ರಾಸ್ತವಿಕವಾಗಿ ಮಾತನಾಡಿ ಯೋಜನೆಯ ಉದ್ದೇಶ ಹಾಗೂ ಯೋಜನೆಯ ಮಾಹಿತಿಯನ್ನು ವಿವರಿಸಿದರು.
ಇಂದಬೆಟ್ಟು ಸಂತ ಫ್ರಾನ್ಸಿಸ್ ಕ್ಷೇವಿಯರ್ ಚರ್ಚ್ ನ ಧರ್ಮಗುರುಗಳಾದ ಫಾ| ಸ್ಪ್ಯಾನಿ ಮೊಂತೇರೋ ಶುಭಾಸಂಶನೆ ನೀಡಿದರು.


ಜಿಲ್ಲಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಶೇಖರ್ ಕುಕ್ಕೇಡಿ, ತಾಲೂಕು ಗ್ರಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ವಂದನಾ ಕುಮಾರಿ, ಕೆ ನೇಮಿರಾಜ್ ಕಿಲ್ಲೂರು, ಹಕೀಂ ಕೊಕ್ಕಡ, ಸೌಮ್ಯ, ವೀರಪ್ಪ ಮೊಯ್ಲಿ, ವಾಸುದೇವ್ ರಾವ್, ಸತೀಶ್ ಹೆಗ್ಡೆ, ಅಬ್ದುಲ್ ಸಲಾಂ, ಮೆರಿಟಾ ಪಿಂಟೋ, ಶ್ರೀಪತಿ ಉಪಾಧ್ಯಾಯ, ಕೇಶವ ನಾಯ್ಕ, ಶರೀಫ್, ಮಲವಂತಿಗೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪ್ರಕಾಶ್ ಜೈನ್, ನಡ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಂಜುಳ, ನಾವೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸುನಂದ ಸಿಡಿಪಿಒ ಪ್ರಿಯಾ ಆಗ್ನೆಸ್, ಮೆಸ್ಕಾಂ ಎಇಇ, ಕ್ಲಮೆಂಟ್ ಬೆಂಜಮಿನ್ ಬ್ರಾಗ್ಸ್, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯ ಅರುಣ್ ಕುಮಾರ್, ಆಹಾರ ಇಲಾಖೆಯ ಶಿರಸ್ತೆದಾ‌ರ್ ವಿಶ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇಂದಬೆಟ್ಟು ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಶ್ಮಿ ಸ್ವಾಗತಿಸಿ, ನಾವೂರು ಗ್ರಾಮ ಪಂಚಾಯತಿಯ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ನಿರ್ಮಲ್ ಕುಮಾರ್ ಧನ್ಯವಾದ ಸಲ್ಲಿಸಿದರು. ಮಿತ್ತಬಾಗಿಲು ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here