Home ಅಪಘಾತ ಮುಂಡಾಜೆಯಲ್ಲಿ ಚರಂಡಿಗೆ ಇಳಿದ ಬಸ್ ಹಲವರಿಗೆ ಗಾಯ

ಮುಂಡಾಜೆಯಲ್ಲಿ ಚರಂಡಿಗೆ ಇಳಿದ ಬಸ್ ಹಲವರಿಗೆ ಗಾಯ

38
0

ಬೆಳ್ತಂಗಡಿ: ಧರ್ಮಸ್ಥಳದಿಂದ ಕಡಿರುದ್ಯಾವರ ಗ್ರಾಮದ ಆಲಂದಡ್ಕ ಸಾಗುವ ಸಾರಿಗೆ ಬಸ್ ಮುಂಡಾಜೆ ಸಮೀಪದ ಸೋಮಂತಡ್ಕದಲ್ಲಿ ಚರಂಡಿಗೆ ಸರಿದ ಘಟನೆ ಜ. 28ರ ಮಂಗಳವಾರ ನಡೆದಿದೆ.

ಧರ್ಮಸ್ಥಳದಿಂದ ಉಜಿರೆ ಮಾರ್ಗವಾಗಿ ಮುಂಡಾಜೆ ಮೂಲಕ ಕಡಿರುದ್ಯಾವರದಿಂದ ಆಲಂದಡ್ಕ ಸಾಗುವ ಬಸ್ ಸುಮಾರು 4.30 ಕ್ಕೆ ಅಪಘಾತ ಸಂಭವಿಸಿದೆ.

ಬಸ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳೇ ಇದ್ದು ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ಮೋರಿ ಅಳವಡಿಸಲಾಗಿದೆ. ಈ ಸ್ಥಳದಲ್ಲಿ ಬಸ್ ನ ಸ್ಟೇರಿಂಗ್ ಕಟ್ ಅಥವಾ ಬ್ರೇಕ್ ಫೈಲ್ ನಿಂದಾಗಿ ಬಸ್ ಸಮೀಪದ ಮೋರಿಗೆ ತಾಗಿ ನಿಂತಿದೆ.
ಹಲವು ವಿದ್ಯಾರ್ಥಿಗಳಿಗೆ, ಬಸ್ ಪ್ರಯಾಣಿಕರಿಗೆ ಗಾಯವಾಗಿದ್ದು, ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ಸಿನ ಮುಂಬದಿಯ ಗಾಜು ಒಡೆದು ಇಬ್ಬರು ಮಕ್ಕಳು ಚರಂಡಿಗೆ ಬಿದ್ದಿದ್ದಾರೆ.

ಸ್ಥಳದಲ್ಲಿ ನೆರೆದಿದ್ದ ಸಾರ್ವಜನಿಕರು ಹಾಗೂ ಹೆದ್ದಾರಿ ಕಾಮಗಾರಿ ಸಿಬಂದಿ ತುರ್ತು ಸ್ಪಂದನೆ ನೀಡಿ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ.

LEAVE A REPLY

Please enter your comment!
Please enter your name here