

ಬೆಳ್ತಂಗಡಿ : ಕರ್ನಾಟಕ ರಾಜ್ಯ ಯುವ ಕಾಂಗ್ರಸ್ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆಯಾಗಿದ್ದಾರೆ. ಯುವ ಕಾಂಗ್ರೆಸ್ ರಾಜ್ಯ ಸಮಿತಿಗೆ ನಡೆದ ಚುನಾವಣೆಯಲ್ಲಿ ಅಭಿನಂದನ್ ಹರೀಶ್ ಕುಮಾರ್ ಅವರು ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಇವರು ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು
ಯುವ ಉದ್ಯಮಿಯಾಗಿರುವ ಅಭಿನಂದನ್ ಅವರು ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿಯೂ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ
