


ಬೆಳ್ತಂಗಡಿ: ಯುವ ಕಾಂಗ್ರೆಸ್ ನ ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೊಕ್ಕಡ ನಿವಾಸಿ ಯುವ ಉದ್ಯಮಿ ಎಸ್. ಕೆ ಹಕ್ಕೀಂ ಕೊಕ್ಕಡ ಅಧ್ಯಕ್ಷಾರಾಗಿ ಆಯ್ಕೆ ಯಾಗಿದ್ದಾರೆ.
ಯುವ ಕಾಂಗ್ರೆಸ್ ನಲ್ಲಿ ಸಕ್ರಿಯರಾಗಿರುವ ಇವರು ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅದ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸುವ ಕಾರ್ಯ ಮಾಡಿದ್ದರು. ಸಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಹಕ್ಕೀಂ ಅವರು ಬೆಳ್ತಂಗಡಿ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಮಹತ್ವದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
