

ಬೆಳ್ತಂಗಡಿ; ತಾಲೂಕಿನ ಕಾಯರ್ತಡ್ಕದಲ್ಲಿ ಅಟೋ ರಿಕ್ಷಾ ದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಬಗ್ಗೆ ಬಂದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳದ ದನ ಸಾಗಾಟಕ್ಕೆ ಉಪಯೋಗಿಸಿದ ರಿಕ್ಷಾ ಹಾಗೂ ದನಗಳನ್ನು ವಶಕ್ಕೆ ಪಡೆಯಲಾಗಿದೆ. ಘಟನೆಯ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
