

ಬೆಳ್ತಂಗಡಿ : ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.
ಉಪ್ಪಿನಂಗಡಿಯ ರಾಮಕುಂಜ ಸಮೀಪದ ಅತೂರು ವಸಂತ ಮತ್ತು ವಿಜಯ ದಂಪತಿಯ ಮಗ ಪವನ್ ( 16) ಮೃತ ಬಾಲಕ. ಈತ ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ ಮನೆಯ ಅಜ್ಜಿಯ ಮನೆಯಲ್ಲಿದ್ದು ಸಿದ್ಧಕಟ್ಟೆ ಪ್ರೌಢಶಾಲೆಯಲ್ಲಿ 10 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
