Home ರಾಜಕೀಯ ಸಮಾಚಾರ ಪದ್ಮುಂಜ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ರಕ್ಷಿತ್ ಪಣೆಕರ ಆಯ್ಕೆ

ಪದ್ಮುಂಜ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ರಕ್ಷಿತ್ ಪಣೆಕರ ಆಯ್ಕೆ

0

ಕಣಿಯೂರು: ಫೆ 28 ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ ಪಿ ಪಾಂಜಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾಗಿ ಡೀಕಯ್ಯ ಗೌಡ,ನಾರಾಯಣ ಗೌಡ, ಉದಯ ಭಟ್, ರುಕ್ಮಯ್ಯ ಗೌಡ ಯಾನೆ ಪ್ರಭಾಕರ ಗೌಡ, ಪ್ರಸಾದ್ ಎ, ಉದಯ ಬಿ.ಕೆ, ಶೀಲಾವತಿ, ಶಾರದಾ ಆರ್ ರೈ, ಚಂದನ್ ಕುಮಾರ್ ಎ, ದಿನೇಶ್ ನಾಯ್ಕ ಇವರುಗಳು ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂನ್ ಅಧಿಕಾರಿ ಪ್ರತಿಮಾ ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಚುನಾವಣಾ ಉಸ್ತುವಾರಿ ಪ್ರಮುಖ್ ಬಾಲಕೃಷ್ಣ ಗೌಡ ಬಿರ್ಮೋಟ್ಟು, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೇoಕ್ಯಾರು, ಬಂದಾರು ಶಕ್ತಿ ಕೇಂದ್ರ ಪ್ರಮುಖ್, ಬಂದಾರು ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಕಣಿಯೂರು ಪಂಚಾಯತ್ ಅಧ್ಯಕ್ಷರಾದ ಸೀತಾರಾಮ, ಕಣಿಯೂರು ಶಕ್ತಿ ಕೇಂದ್ರ ಪ್ರಮುಖ್ ವಕೀಲರಾದ ಯತೀಶ್ ಪಣೆಕ್ಕರ, ಮೊಗ್ರು ಕೇಂದ್ರ ಪ್ರಮುಖ್ ಗಂಗಾಧರ ಪೂಜಾರಿ, ಮಂಡಲ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ, ಬಂದಾರು,ಮೊಗ್ರು, ಕಣಿಯೂರು ಜನಪ್ರತಿನಿದಿನಗಳು,ಬೂತ್ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version