

ಬೆಳ್ತಂಗಡಿ: ವೇಣೂರು ಸಬ್ ಸ್ಕ್ರೆಷನ್ ಎರಡು ವಿದ್ಯುತ್ ಫೀಡರ್ಗಳಿದ್ದು ಕಳೆದ ಬಾರಿ ಒಂದು ವಿದ್ಯುತ್ ಫೀಡರನ್ನು 5 ಮೆಗಾವೋಲ್ಟ್ ನಿಂದ 8 ಮೆಗಾ ವೋಲ್ಟ್ ಗೆ ಪರಿವರ್ತಿಸಿ ವೇಣೂರು ಮತ್ತು ಸುತ್ತ ಮುತ್ತಲಿನ ಗ್ರಾಮದ ರೈತರು ಮತ್ತು ಗ್ರಾಮಸ್ಥರಿಗೆ ತುಂಬಾ ಅನುಕೂಲವಾಗಿದೆ.
ಇದೀಗ ಆಗಾಗ ವಿದ್ಯುತ್ ಕಡಿತವಾಗುವುದರಿಂದ
ಈಗ ಬಾಕಿ ಇರುವ ವಿದ್ಯುತ್ ಫೀಡರನ್ನು ಸಹ ಐದು ಮೆಗಾ ವೋಲ್ಟ್ ನಿಂದ ಹತ್ತು ಮೆಗಾ ವೋಲ್ಟ್ ಪರಿವರ್ತಿಸಿ ವಿದ್ಯುತ್ ಸಮಸ್ಯೆಯನ್ನು ಪರಿಹರಿಸುವಂತೆ ಸರ್ಕಾರದ ಗಮನವನ್ನು ಸೆಳೆಯಬೇಕೆಂದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ನಗರದ ಅಧ್ಯಕ್ಷರಾದ ದಯಾನಂದ ದೇವಾಡಿಗ ಇವರ ನೇತೃತ್ವದಲ್ಲಿ ಮನವಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಶೇಖರ್ ಕುಕ್ಕೇಡಿ, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ಜಯರಾಮ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ನಗರದ ಅಧ್ಯಕ್ಷರಾದ ವಂದನಾ ಬಂಡಾರಿ, ತಾಲೂಕು ಆರಾಧನಾ ಸಮಿತಿಯ ಸದಸ್ಯರಾದ ಬಾಲಕೃಷ್ಣ ಭಟ್, ಗ್ಯಾರಂಟಿ ಯೋಜನೆಯ ಸದಸ್ಯರಾದ ಸತೀಶ್ ಹೆಗ್ಡೆ, ಪಕ್ಷದ ಪ್ರಮುಖರಾದ, ರಮೇಶ್ ಪೂಜಾರಿ ಪಡ್ಡಾಯಿ ಮಜಲ್, ಹರೀಶ್ ಪೊಕ್ಕಿ, ಅಶ್ರಫ್ ಕರಿಮಣೇಲು, ತೋಮಸ್ ಅಂಡಿಂಜೆ, ಹಾಗೂ ಪಕ್ಷದ ಕಾರ್ಯಕರ್ತರು ಸಾರ್ವಜನಿಕರು ಉಪಸ್ಥಿತರಿದ್ದರು.
