

ಬೆಳ್ತಂಗಡಿ: ಉಜಿರೆಯ ಅನುಗ್ರಹ ಪಿ.ಯು ಕಾಲೇಜಿನಲ್ಲಿ ಮಾ.3ರಂದು ರಾತ್ರಿಯ ವೇಳೆ ಕಳತನದ ಘಟನೆ ನಡೆದಿದೆ.
ಕಾಲೇಜಿಜ ಕಚೇರಿಯ ಬೀಗ ಒಡೆದು ಒಳ ನುಗ್ಗಿದ ಕಳ್ಳರು ಕಚೇರಿಯಲ್ಲಿ ಹಣಕ್ಕಾಗಿ ಹುಡುಕಾಟ ನಡೆಸಿದ್ದು ಕಚೇರಿಯಲ್ಲಿದ್ದ ದಾಖಲೆಗಳನ್ನು ಚೆಲ್ಲಪಿಲ್ಲಿ ಮಾಡಿ ಹಾಕಿದ್ದಾರೆ. ಕಚೇರಿಯಿಂದ ಸಿಸಿಕ್ಯಾಮೆರಾದ ಎನ್.ವಿ.ಆರ್ ಹಾರ್ಡ್ ಡಿ್ಸ್ಕ್ ಅನ್ನು ಕದ್ದೊಯ್ದಿದ್ದಾರೆ.
ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ಬೆರಳಚ್ಚು ತಜ್ಞರನ್ನು ಸ್ಥಳಕ್ಕೆ ಕರೆಸಲಾಗಿದ್ದು ಪರಿಶೀಲನೆ ನಡೆಸಲಾಗಿದೆ. ಕಳ್ಳರ ಚಹರೆಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಇದನ್ನು ಇಟ್ಟುಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
