

ಬೆಳ್ತಂಗಡಿ; ಉಜಿರೆಯಲ್ಲಿ ಬೈಕ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.
ಮೃತ ವ್ಯಕ್ತಿ ಉಜಿರೆ ನಿವಾಸಿ ಜಯಂತ್ (56) ಎಂಬವರಾಗಿದ್ದಾರೆ.
ಇವರು ಮಾ.7ರಂದು ರಾತ್ರಿಯ ವೇಳೆ ಉಜಿರೆಯಿಂದ ಬಂದು ಭಾರತ್ ಶೋರೂಮ್ ಬಳಿ ಅಜಿತ್ ನಗರದ ರಸ್ತೆಗೆ ತಿರುಗಿಸುವ ವೇಳೆ ಉಜಿರೆ ಕಡೆಗೆ ಬರುತ್ತಿದ್ದ ಬೈಕ್ ಅವರಿಗೆ ಡಿಕ್ಕಿ ಹೊಡೆದಿದೆ.

ಹೊಡೆತದ ರಭಸಕ್ಕೆ ರಸ್ತೆಗೆ ಬಿದ್ದ ಜಯಂತ್ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ. ಬೈಕ್ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
