

ಬೆಳ್ತಂಗಡಿ; ಕಳೆಂಜ ಗ್ರಾಮದ ಕಾಂಗ್ರೇಸ್ ಗ್ರಾಮ ಸಮಿತಿಯ ಸಭೆ ನಡೆಯಿತು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಭೆಯಲ್ಲಿ ಭಾಗವಹಿಸಿ ಪಕ್ಷ ಸಂಘಟನೆಗೆ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ, ಗ್ರಾಮೀಣ ಬ್ಲಾಕ್ ಕಾಂಗೇಸ್ ಸಮಿತಿಯ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಕೆಪಿಸಿಸಿ ಸದಸ್ಯರಾದ ಕೇಶವ ಪಿ ಬೆಳಾಲು, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಸೆಬಾಸ್ಟಿನ್ ಪಿ.ಟಿ, ತಾಲೂಕು ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ಶ್ರೀದರ್ ಕಳೆಂಜ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯುವ ಕಾಂಗೇಸ್ ಅದಕ್ಷರಾದ ಹಕಿಂ ಕೊಕ್ಕಡ, ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ಬೊಮ್ಮಣ್ಣ ಗೌಡ, ಕಳಂಜ ಗ್ರಾಮ ಪಂಚಾಯತ್ ಸದಸ್ಯರಾದ, ನಿತ್ಯಾನಂದ ರೈ, ಶ್ರೀಮತಿ ಪ್ರೇಮಾ, ಗ್ರಾಮ ಸಮಿತಿ ಅಧ್ಯಕ್ಷರಾದ ಕುಶಾಲಪ್ಪ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿ ವಸಂತ ಗೌಡ ಪಂಜಾಲು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು, ಇ ಸಭೆಯಲ್ಲಿ ಪಕ್ಷದ ವಿವಿಧ ಘಟಕಗಳ ಮುಖಂಡರು, ಕಾರ್ಯಕರ್ತರು ಬೂತ್ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.
