

ಬೆಳ್ತಂಗಡಿ; ದಯಾ ವಿಶೇಷ ಶಾಲೆಗೆ ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದಂತಹ ಅತೀ ವಂದನೀಯ ಡಾ||ಪೀಟರ್ ಪಾವ್ಲ್ ಸಲ್ಡಾನ್ಹಾ ರವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಷಪ್ ಅವರು ವಿಶೇಷ ಮಕ್ಕಳಲ್ಲಿ ವಿಶೇಷವಾದ ಪ್ರೀತಿ ಕಾಣುತ್ತದೆ, ಈ ಮಕ್ಕಳ ನಗು ನಮ್ಮಲ್ಲಿರುವ ಎಲ್ಲಾ ನೋವುಗಳನ್ನು ಮರೆಸುತ್ತದೆ ಹಾಗೆಯೇ ವಿಶೇಷ ಚೇತನ ಮಕ್ಕಳ ಮನಸ್ಸಿನಲ್ಲಿ ಕಪಟವಿಲ್ಲ ಅವರ ಹೃದಯದಲ್ಲಿ ನೈರ್ಮಲ್ಯತೆ ಹೆಚ್ಚಿರುತ್ತದೆ ಎಂದರು. ಇಂತಹ ವಿಶೇಷ ಚೇತನ ಮಕ್ಕಳಿಗೆ ಸೇವೆ ಮಾಡುವುದೆಂದರೆ ಅದೊಂದು ದೊಡ್ಡ ಕಾರ್ಯ ಅಂತನಹ ಸೇವೆ ನೀಡುತ್ತಿರುವ ದಯಾ ವಿಶೇಷ ಶಾಲೆಯ ಎಲ್ಲಾ ಸಿಬ್ಬಂದಿಗಳ ಸೇವೆಯನ್ನು ಶ್ಲಾಘಿಸಿದರು. ಈ ಶಾಲೆಯ ಅಭಿವೃದ್ಧಿಗೆ ಎಲ್ಲರೂ ಕೈ ಜೋಡಿಸುವಂತೆ ಸಲಹೆ ನೀಡಿದರು.

2024 ರ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಮಂಗಳೂರು ಧರ್ಮ ಪ್ರಾಂತ್ಯದ ವತಿಯಿಂದ ದಯಾ ವಿಶೇಷ ಶಾಲೆಯ ನಿರ್ದೇಶಕರಾದಂತಹ ವಂದನೀಯ ಫಾದರ್ ವಿನೋದ್ ಮಸ್ಕರೇನ್ಹಸ್ ರವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪ್ರಾಂತ್ಯದ ಪ್ರಧಾನ ಧರ್ಮ ಗುರುಗಳಾದ ವಂದನನೀಯ ಫಾದರ್ ವಾಲ್ಟರ್ ಡಿಮೆಲ್ಲೋ, ಹೋಲಿ ರಿಡೀಮರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಬೆಳ್ತಂಗಡಿಯ ಪ್ರಾಂಶುಪಾಲರು ವಂದನಿಯ ಫಾದರ್ ಕ್ಲಿಫರ್ಡ್ ಪಿಂಟೋ, ಧರ್ಮಾಧ್ಯಕ್ಷರ ಕಾರ್ಯದರ್ಶಿಗಳು ವಂದನೀಯ ಫಾದರ್ ತ್ರಿಶನ್ ,
ದಯಾ ವಿಶೇಷ ಶಾಲೆಯ ನಿರ್ದೇಶಕರಾದಂತ ವಂದನೀಯ ಫಾದರ್ ವಿನೋದ್ ಮಸ್ಕರೇನ್ಹಸ್ ಹಾಗೂ ಶಾಲಾ ಸಹ ನಿರ್ದೇಶಕರಾದಂತಹ ವಂದನೀಯ ಫಾದರ್ ರೋಹನ್ ಲೋಬೊ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು..
ಶಾಲಾ ಮುಖ್ಯ ಶಿಕ್ಷಕಿ ದಿವ್ಯ ಅತಿಥಿಗಳನ್ನು ಸ್ವಾಗತಿಸಿ ಶಾಲೆಯ ಕಿರು ಪರಿಚಯವನ್ನು ನೀಡಿ ವಂದಿಸಿದರು.
