

ಬೆಳ್ತಂಗಡಿ; ಮಹಿಳಾ ಶಕ್ತಿ ದೇಶದ ಶಕ್ತಿ, ಮಹಿಳೆ ತಮ್ಮ ಶಕ್ತಿ ಸಾಮರ್ಥ್ಯವನ್ನು ಬೆಳೆಸಿ ಮುಂದೆ ಬಂದರೆ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ, ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು ಹಾಗೂ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಅಧ್ಯಕ್ಷರು ಆಗಿರುವ ಪರಮಪೂಜ್ಯ ಲಾರೆನ್ಸ್ ಮುಕ್ಕುಯಿ ಹೇಳಿದರು.
ಅವರು ಬೆಳ್ತಂಗಡಿಯಲ್ಲಿ ಡಿ.ಕೆ ಆರ್. ಡಿ.ಎಸ್ ವತಿಯಿಂದ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಉಪಾಧ್ಯಕ್ಷರಾದ ವಲ್ಸಮ್ಮ ಎ.ಜೆ ಇವರು ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಅನ್ನಮ್ಮ ಡೆಪ್ಯೂಟಿ ಕಮಾಂಡಂಟ್ ಸಿ.ಆರ್. ಪಿ .ಎಫ್ ಮಣಿಪುರ ಹಾಗೂ ವಲ್ಸಮ್ಮ ಏ.ಜೆ ಇವರನ್ನು ಸನ್ಮಾನಿಸಲಾಯಿತು.

ಡಾ. ಸಂಜಾತ್ ತಾಲೂಕು ಆರೋಗ್ಯ ಅಧಿಕಾರಿ ಇವರು ತರಕಾರಿ ಕೈ ತೋಟ ರಚನಾ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಹಿಳೆ ಮತ್ತು ಮಕ್ಕಳ ಆರೋಗ್ಯ ಹಾಗೂ ಸರಕಾರಿ ಇಲಾಖೆಯಿಂದ ಸಿಗುವ ಸೌಲಭ್ಯದ ಕುರಿತು ಮಾಹಿತಿ ನೀಡಿದರು. ಕ್ಷೇತ್ರ ಶಿಕ್ಷಣ ಅಧಿಕಾರಿ ತಾರಕೇಶ್ವರಿ ಇವರು ಹತ್ತನೇ ತರಗತಿಯಲ್ಲಿ ಅತ್ಯಧಿಕ ಅಂಕ ಪಡೆದ ಕುಮಾರಿ ಸ್ನೇಹ ಎಲಿಜಬೆತ್ ಇವರನ್ನು ಸನ್ಮಾನಿಸಿ ಮಹಿಳೆ ಮತ್ತು ಶಿಕ್ಷಣದ ಬಗ್ಗೆ ಮಾಹಿತಿ ನೀಡಿ ಶುಭ ಹಾರೈಸಿದರು.

ಮಾನಿನಿ ರಾಜ್ಯ ಮಹಿಳಾ ಒಕ್ಕೂಟದ ಅಧ್ಯಕ್ಷೆ ಮಂಜುಳಾ ಜಾನ್ ಮಾತನಾಡಿ ಶುಭ ಹಾರೈಸಿದರು.
ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಇದರ ಸದಸ್ಯರು ಅರಿವಿನ ಹಾಡಿನ ಮೂಲಕ ಜಾಗೃತಿ ಮೂಡಿಸಿದರು. ಡಿ .ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ಬಿನೋಯಿ ಎ.ಜೆ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಗುರಿ ಉದ್ದೇಶದ ಕುರಿತು ವಿವರಿಸಿದರು.

ಕಿರಣ್ ಮಹಿಳಾ ತಾಲೂಕು ಒಕ್ಕೂಟ ಕಡಬ ಇದರ ಸದಸ್ಯರು ಸ್ವಾಗತ ನೃತ್ಯ ಮಾಡಿದರು. ಸ್ನೇಹ ಜ್ಯೋತಿ ಒಕ್ಕೂಟ ಇದರ ಸದಸ್ಯರು ಪ್ರಾರ್ಥನಾ ಹಾಡಿದರು.
ಜಿಲ್ಲಾ ಒಕ್ಕೂಟದ ಕಾರ್ಯದರ್ಶಿ ಡೈಸಿ ಜೋಯ್ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಉಷಾ ವಂದಿಸಿದರು. ಜಿನ್ಸಿ ರಾಜೇಶ್, ಹಾಗೂ ರೆಬೇಕಾ ಕಾರ್ಯಕ್ರಮ ನಿರೂಪಿಸಿದರು.
