

ಬೆಳ್ತಂಗಡಿ; ಗೇರುಕಟ್ಟೆ ಜನತಾ ಕಾಲೊನಿ ಸಮೀಪ ಗೇರು ತೋಟದಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಭವಿಸಿದೆ.
ಮೃತ ವ್ಯಕ್ತಿ ತಣ್ಣೀರು ಪಂತ ಗ್ರಾಮದ ಕಲ್ಲೇರಿ ನಿವಾಸಿ ರವಿ ಯಾನೆ ವಾಸುದೇವ ನಾಯ್ಕ (44)ಎಂದು ಗುರುತಿಸಲಾಗಿದೆ.
ಈತ ರಸ್ತೆ ಬದಿಯಲ್ಲಿ ಹಣ್ಣುಗಳ ವ್ಯಾಪಾರ ನಡೆಸುತ್ತಿದ್ದು ಯಾವುದೋ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನಿಸಲಾಗಿದೆ.

ಈತ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ಸ್ಥಳೀಯ ಗ್ರಾ.ಪಂ ಸದಸ್ಯ ಅಬ್ದುಲ್ ಕರೀಂ ಅವರಿಗೆ ಹಾಗೂ ಇತರರಿಗೆ ಮಾಹಿತಿ ನೀಡಿದ್ದಾರೆ. ಅವರು ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
