Home ಅಪರಾಧ ಲೋಕ ಬಂದಾರು: ಮಾರ್ಚ್ 16 ಮೈರೋಳ್ತಡ್ಕ ಸರಕಾರಿ ಶಾಲೆಯಲ್ಲಿ ಎಸ್ಡಿ. ಎಮ್. ಹಾಸ್ಪಿಟಲ್ ಉಜಿರೆ  ಇದರ ವತಿಯಿಂದ...

ಬಂದಾರು: ಮಾರ್ಚ್ 16 ಮೈರೋಳ್ತಡ್ಕ ಸರಕಾರಿ ಶಾಲೆಯಲ್ಲಿ ಎಸ್ಡಿ. ಎಮ್. ಹಾಸ್ಪಿಟಲ್ ಉಜಿರೆ  ಇದರ ವತಿಯಿಂದ ಉಚಿತ ಬೃಹತ್ ಅರೋಗ್ಯ ತಪಾಸಣಾ ಶಿಬಿರ

7
0

ಬಂದಾರು: ಎಸ್
ಡಿ. ಎಮ್. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಉಜಿರೆ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಸರಕಾರಿ ಉನ್ನತಿಕರಿಸೀದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ, ಅಮೃತ ಮಹೋತ್ಸವ ಸಮಿತಿ ಮತ್ತು ಹಳೆ ವಿದ್ಯಾರ್ಥಿ ಸಂಘ ಮೈರೋಳ್ತಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಪ್ರಗತಿಬಂಧು ಒಕ್ಕೂಟ ಮೈರೋಳ್ತಡ್ಕ ಇದರ ಸಹಯೋಗದಲ್ಲಿ ಮಾರ್ಚ್ 16 ಭಾನುವಾರ ದಂದು ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಉಚಿತ ಬೃಹತ್ ಅರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.

ಉದ್ಘಾಟನಾ ಸಮಾರಂಭದಲ್ಲಿ ಸ್ಥಳೀಯ ಪ್ರಮುಖ ಗಣ್ಯರು ಆಗಮಿಸಲಿದ್ದಾರೆ. ಶಿಬಿರದಲ್ಲಿ ಮೂಳೆ ಶಸ್ತ್ರಚಿಕಿತ್ಸಾ ತಜ್ಞರು, ಕಣ್ಣಿನ ತಜ್ಞರು, ಚರ್ಮರೋಗ ತಜ್ಞರು, ಸ್ತ್ರೀ ರೋಗ ತಜ್ಞರು, ಕಿವಿ -ಮೂಗು -ಗಂಟಲು ತಜ್ಞರು, ಮಕ್ಕಳ ರೋಗ ತಜ್ಞರು, ಮೆಡಿಸಿನ್ ವಿಭಾಗ ತಜ್ಞರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ತ

LEAVE A REPLY

Please enter your comment!
Please enter your name here