
ವೇಣೂರು: 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಕೂಟ ದಿನಾಂಕ 30/3/2025ನೇ ಆದಿತ್ಯವಾರ ನಡೆಯಲಿದ್ದು. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಕಂಬಳ ಸಮಿತಿಯ ಅಧ್ಯಕ್ಷರಾದ ನಿತೀಶ್ ಎಚ್ ಕೋಟ್ಯಾನ್ ರ ಅಧ್ಯಕ್ಷತೆಯಲ್ಲಿ ನಡೆಯಿತು,
ಕಂಬಳ ಸಮಿತಿಯ ಗೌರವಾಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ, ಕಂಬಳದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು, ಈ ಸಂದರ್ಭದಲ್ಲಿ ಸಮಿತಿಯ ಕಾರ್ಯಾಧ್ಯಕ್ಷರಾದ ಶೇಖರ್ ಕುಕ್ಕೆಡಿ, ಪ್ರಧಾನ ಕಾರ್ಯದರ್ಶಿ ಭರತರಾಜ್ ಜೈನ್ ಪಾಪುದಡ್ಕಗುತ್ತು, ಕೋಶಾಧಿಕಾರಿ ಅಶೋಕ್ ಪಾಣೂರು, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಜಯರಾಮ ಶೆಟ್ಟಿ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಹಾಗೂ ಕಂಬಳ ಸಮಿತಿಯ ಪದಾಧಿಕಾರಿಗಳು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.