Home ರಾಜಕೀಯ ಸಮಾಚಾರ ಇಳಂತಿಲ; ಬಿಜೆಪಿ ಬೆಂಬಲಿತ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಪಾಸ್; ಅಧಿಕಾರ ಕಳೆದುಕೊಂಡ ಅಧ್ಯಕ್ಷರು

ಇಳಂತಿಲ; ಬಿಜೆಪಿ ಬೆಂಬಲಿತ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಪಾಸ್; ಅಧಿಕಾರ ಕಳೆದುಕೊಂಡ ಅಧ್ಯಕ್ಷರು

42
0

ಬೆಳ್ತಂಗಡಿ: ಇಳಂತಿಲ ಗ್ರಾ.ಪಂ.ನ ಬಿಜೆಪಿ ಬೆಂಬಲಿತ ಅಧ್ಯಕ್ಷರಾದ ತಿಮ್ಮಪ್ಪ ಗೌಡ ಅವರ ವಿರುದ್ಧ ಮಂಡಿಸಲಾಗಿದ್ದ ಅವಿಶ್ವಾಸ ಗೊತ್ತುವಳಿ ಅಂಗೀಕಾರಗೊಂಡಿದ್ದು ಅವರು ಅಧಿಕಾರ ಕಳೆದುಕೊಂಡಿದ್ದಾರೆ.
ಮಾ.18 ರಂದು ಇಳಂತಿಲ ಗ್ರಾಮ ಪಂಚಾಯತಿನಲ್ಲಿ
ಅವಿಶ್ವಾಸ ಗೊತ್ತುವಳಿ ಮಂಡನೆಯು ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದು, ಗ್ರಾ.ಪಂ.ನ 14 ಮಂದಿ ಸದಸ್ಯರಲ್ಲಿ 12 ಮಂದಿ ಸದಸ್ಯರು ಅವಿಶ್ವಾಸದ ನಿರ್ಣಯ ಸೂಚನಾ ಸಭೆಯಲ್ಲಿ ಅಧ್ಯಕ್ಷರ ವಿರುದ್ಧ ಮತ ಚಲಾಯಿಸಿದ್ದು ಅಧ್ಯಕ್ಷರು ಅಧಿಕಾರ ಕಳೆದುಕೊಂಡಿದ್ದಾರೆ.

ಕಳೆದ ಫೆ.20ರಂದು ಇಳಂತಿಲ ಗ್ರಾ.ಪಂ. ಸದಸ್ಯರಾದ ವಸಂತ ಕುಮಾರ್, ವಿಜಯಕುಮಾರ್, ಚಂದ್ರಿಕಾ ಭಟ್, ಉಷಾ ಯು., ಸುಪ್ರೀತ್ ಪಿ., ಸಿದ್ದೀಕ್. ಯು.ಕೆ. ಈಸುಬು, ಕುಸುಮ, ನುಸ್ರುತ್ ಹೀಗೆ 9 ಮಂದಿ ಸದಸ್ಯರು ಗ್ರಾ.ಪಂ. ಅಧ್ಯಕ್ಷ ತಿಮ್ಮಪ್ಪ ಗೌಡ ಅವರು ಗ್ರಾ.ಪಂ.ನಲ್ಲಿ ಸದಸ್ಯರುಗಳಾದ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಗ್ರಾ.ಪಂ.ನ ಹಿತವನ್ನು ಧಿಕ್ಕರಿಸಿ ತಮ್ಮ ಮನಸೋ ಇಚ್ಚೆ ಕೆಲಸ, ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಅಧ್ಯಕ್ಷರ ವಿರುದ್ಧ ಪುತ್ತೂರು ಉಪವಿಭಾಗಾಧಿಕಾರಿ ಅವರಿಗೆ ಅವಿಶ್ವಾಸ ಗೊತ್ತುವಳಿಯನ್ನು ಮಂಡಿಸಿದ್ದರು.
ಅವಿಶ್ವಾಸ ನಿರ್ಣಯ ಸೂಚನಾ ಸಭೆ ಇಳಂತಿಲ ಗ್ರಾ.ಪಂ. ಕಚೇರಿಯಲ್ಲಿ ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರ ಅಧ್ಯಕ್ಷತೆಯಲ್ಲಿ ಮಾ.18 ರಂದು ನಡೆಯಿತು. ಈ ಸಂದರ್ಭ ಅವಿಶ್ವಾಸ ನಿರ್ಣಯಕ್ಕೆ ನೋಟೀಸ್ ನೀಡಿದ್ದ ಈ 9 ಮಂದಿ ಸದಸ್ಯರಲ್ಲದೇ, ಗ್ರಾ.ಪಂ. ಉಪಾಧ್ಯಕ್ಷೆ ಸವಿತಾ, ಉಷಾ ಎಂ. ಜಾನಕಿ ಅವರು ಅಧ್ಯಕ್ಷರ ವಿರುದ್ಧ ಕೈ ಎತ್ತುವ ಮೂಲಕ ಮತ ಚಲಾಯಿಸಿದ್ದಾರೆ. ಅಧ್ಯಕ್ಷರ ಪರ ಗ್ರಾ.ಪಂ. ಸದಸ್ಯರಾಗಿರುವ ರಮೇಶ ಮಾತ್ರ ಇದ್ದರು. 14 ಮಂದಿ ಸದಸ್ಯರಿರುವ ಇಳಂತಿಲ ಗ್ರಾ.ಪಂ.ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು 11. ಕಾಂಗ್ರೆಸ್ ಬೆಂಬಲಿತ ಇಬ್ಬರು ಸದಸ್ಯರು ಇಬ್ಬರು ಹಾಗೂ ಎಸ್‌ಡಿಪಿಐ ಬೆಂಬಲಿತ ಒಬ್ಬ ಸದಸ್ಯರು ಇದ್ದಾರೆ. ಇಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾಗಿರುವ ತಿಮ್ಮಪ್ಪ ಗೌಡರ ವಿರುದ್ಧವೇ 9 ಮಂದಿ ಬಿಜೆಪಿ ಬೆಂಬಲಿತ ಸದಸ್ಯರು ತಿರುಗಿ ಬಿದ್ದಂತಾಗಿದೆ. ಅವಿಶ್ವಾಸದ ನಿರ್ಣಯ ಸೂಚನಾ ಸಭೆಯಲ್ಲಿ ಮೂರರಲ್ಲಿ ಎರಡು ಭಾಗದಷ್ಟು ಸದಸ್ಯರು ಅಧ್ಯಕ್ಷರ ವಿರುದ್ಧ ಮತ ಚಲಾಯಿಸಿದಾಗ ಮಾತ್ರ ಅಧ್ಯಕ್ಷರು ತನ್ನ ಸ್ಥಾನ ಕಳೆದುಕೊಳ್ಳಲು ಸಾಧ್ಯ. 14 ಮಂದಿ ಸದಸ್ಯ ಬಲದ ಈ ಗ್ರಾ.ಪಂ.ನಲ್ಲಿ ಅಧ್ಯಕ್ಷರು ತನ್ನ ಸ್ಥಾನ ಕಳೆದುಕೊಳ್ಳಲು 10 ಮಂದಿ ಸದಸ್ಯರು ಅಧ್ಯಕ್ಷರ ವಿರುದ್ಧ ಮತ ಚಲಾಯಿಸಬೇಕಿತ್ತು. ಆದರೆ ಇಲ್ಲಿ 12 ಮಂದಿ ಸದಸ್ಯರು ಅಧ್ಯಕ್ಷರ ವಿರುದ್ಧ ಮತ ಚಲಾಯಸಿದ್ದಾರೆ. ಸಭೆಯಲ್ಲಿ ಗ್ರಾ.ಪಂ. ಪಿಡಿಒ ಸುಮಯ್ಯ, ಕಾರ್ಯದರ್ಶಿ ವಿಜಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here