Home ಸ್ಥಳೀಯ ಸಮಾಚಾರ ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ. ರಕ್ಷಿತ್ ಶಿವರಾಂ...

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

29
0

ಬೆಳ್ತಂಗಡಿ;  ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 27ರಂದು ನಡೆದ ಸಭೆಯಲ್ಲಿ ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತ ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಮಾರ್ಗ ಅಳವಡಿಕೆಗೆ ಅರಣ್ಯ ಭೂಮಿ ಪರಿವರ್ತನೆಗಾಗಿ ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಹಾಕಿಸಿ, ಅನುಮತಿ ಪಡೆಯಲು ಕ್ರಮ ವಹಿಸಿದ್ದರು. ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದರು.

ಈ ಬಗ್ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ರವರು ಅನುಮತಿಗಾಗಿ ಹೆಚ್ಚಿನ ಮುತುವರ್ಜಿ ಸಹಕರಿಸಿದಕ್ಕಾಗಿ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ ನಿವಾಸಿಗಳು ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ನಗರ ಸಮಿತಿ ಅಧ್ಯಕ್ಷರಾದ ಸತೀಶ್ ಕೆ. ಕಾಶಿಪಟ್ಣ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ಮಿತ್ತಮಾರ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ಎಮ್, ಪ್ರಸಾದ್ ಪಿಂಟೋ, ಕೆಡಿಪಿ ಸದಸ್ಯರಾದ ಸುನಿಲ್ ಜೈನ್, ಹಾಗೂ ಪ್ರಮುಖರು ಉಪಸ್ಥಿರಿದ್ದರು.

LEAVE A REPLY

Please enter your comment!
Please enter your name here