Home ಸ್ಥಳೀಯ ಸಮಾಚಾರ ಬೆಳ್ತಂಗಡಿ; ತಾಲೂಕಿನಾಧ್ಯಂತ ಉತ್ತಮ‌ ಮಳೆ

ಬೆಳ್ತಂಗಡಿ; ತಾಲೂಕಿನಾಧ್ಯಂತ ಉತ್ತಮ‌ ಮಳೆ

25
0

ಬೆಳ್ತಂಗಡಿ: ತಾಲೂಕಿನ ಹಲವು ಪ್ರದೇಶಗಳಲ್ಲಿ  ಎ.2ರ ಬುಧವಾರ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ.

ಮುಂಡಾಜೆ, ಕಕ್ಕಿಂಜೆ, ಧರ್ಮಸ್ಥಳ, ಉಜಿರೆ, ನಡ, ನಿಡಿಗಲ್, ಪಣಕಜೆ, ಅಳದಂಗಡಿ, ಧರ್ಮಸ್ಥಳ ಸಹಿತ ಬಹುತೇಕ ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಿದೆ.

ಇಂದು ಮಧ್ಯಾಹ್ನದ ವೇಳೆಗೆ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು ಮಳೆ ಆರಂಭಗೊಂಡಿದೆ. ಉತ್ತಮ ಮಳೆಯಿಂದಾಗಿ ವಾತಾವರಣ ತಂಪಾಗಿದೆ.
ಆದರೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಪರಿಣಾಮ ಕೆಲಸ ಕಾರ್ಯಗಳಿಗೆ ಸಮಸ್ಯೆ ಉಂಟಾಗಿದೆ. ಕಕ್ಕಿಂಜೆಯಲ್ಲಿ ಮಳೆ ತೀವ್ರವಾದ ಪರಿಣಾಮ ರಸ್ತೆಯಲ್ಲೇ ನೀರು ಹರಿದು ಹೋಗುತ್ತಿರುವ ದೃಶ್ಯ ಕಂಡುಬಂತು.

ಕಳೆದ ಎರಡು ವಾರಗಳಿಂದ ತಾಲೂಕಿನಲ್ಲಿ ಬಿಸಿಲಿನ ವಾತಾವರಣ ಕಂಡು ಬಂದಿದ್ದು ಇಂದಿನ ಮಳೆ ವಾತಾವರಣವನ್ನು ತಂಪುಗೊಳಿಸಿದೆ

LEAVE A REPLY

Please enter your comment!
Please enter your name here