
ಬೆಳ್ತಂಗಡಿ: ಸಮಾಜದ ಅಸಮಾನತೆಗಳ ವಿರುದ್ಧ ಹೋರಾಡಿದವರು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಅವರ ಜೀವನ ನಮಗೆ ಆದರ್ಶವಾಗಿದೆ. ಅವರು ನೀಡಿದ ಸಂವಿಧಾನದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಗಿದ್ದು ಇದು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಕೊಡುಗೆಯಾಗಿದೆ ಎಂದು ಶಾಸಕ ಹರೀಶ್ ಪೂಂಜಾ ಹೇಳಿದರು. ಅವರು ಸೋಮವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರ 135 ನೇ ಜನ್ನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಜಗತ್ತು ಮೆಚ್ಚುವ ಸಂವಿಧಾನ ನೀಡಿದ ಅಂಬೇಡ್ಕರ್ ಧರ್ಮಾದಾರಿತ ಮೀಸಲಾತಿಗೆ ವಿರೋದ ಪಡಿಸಿದ್ದರು ಎಂದರು. ತಾಲೂಕು ಕ್ರೀಡಾಂಗಣದಲ್ಲಿ ಮೂರು ಎಕರೆ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲು ಉದ್ದೇಶಿಸಿ ಹಿಂದಿನ ಸರಕಾರ ಸುಮಾರು ಎಂಟು ಕೋಟಿ ಅನುದಾನ ಮಂಜೂರಾತಿ ಮಾಡಿದ್ದು ಅದನ್ನು ಈಗಿನ ಸರಕಾರ ಬಿಡುಗಡೆ ಮಾಡಿಲ್ಲ. ಅನೇಕ ಭಾರಿ ಈ ಬಗ್ಗೆ ಸಂಭಂದ ಪಟ್ಟ ಸಚಿವ ರಲ್ಲಿ ಅನುದಾನ ಬಿಡುಗಡೆ ಮಾಡುವಂತೆ ವಿನಂತಿಸಲಾಗಿದ್ದು ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದರು. ಹಾಸ್ಟೆಲ್ ನಲ್ಲಿ ವ್ಯಾಸಾಂಗ ಮಾಡಿದ ವಿಷೇಷ ಚೇತನ ವಿದ್ಯಾರ್ಥಿನಿ ಹಸೀನಾ ದ್ವಿತಿಯ ಪಿಯುಸಿ ಯಲ್ಲಿ 88.83% ಅಂಕ ಗಳಿಸಿದ್ದು ಇವಳ ಮುಂದಿನ ವಿದ್ಯಾಭ್ಯಾಸಕ್ಕೆಗೆ ನೆರವು ನೀಡುವುದಾಗಿ ತಿಳಿಸಿದರು. ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕ ಸಾಹಿತಿ ಅರವಿಂದ ಚೊಕ್ಕಾಡಿ ಪ್ರದಾನ ಭಾಷಣ ಮಾಡಿ ಅಂಬೇಡ್ಕರ್ ಜ್ನಾನದ ಮಹಾಸಾಗರ. ಅವರು ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಕ್ಕೆ ಮಹತ್ವ ನೀಡಿದವರು. ಭಯಮುಕ್ತ ಬದುಕಿಗೆ ಒಲವನ್ನು ನೀಡಿದ ಇವರು ಸರ್ಕಾರಿ ವ್ಯವಸ್ಥೆ ಬಗ್ಗೆ ಅಪಾರ ನಂಬಿಕೆ ಇಟ್ಟಿದ್ದರು. ಎಲ್ಲರಲ್ಲಿಯೂ ಕ್ರಿಯಾಶೀಲ ಮನಸ್ಸು ,ಸ್ವ ಅರಿತುಕೊಳ್ಳುವ ಮನೋಬಾವ ಬೆಳೆಯಬೇಕು ಎಂದರು. ಕಾರ್ಯಕ್ರಮದಲ್ಲಿ ತಹಶಿಲ್ದಾರ್ ಪ್ರುಥ್ವಿಸಾನಿಕಂ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅದ್ಯಕ್ಷ ಪದ್ಮನಾಭ ಸಾಲ್ಯಾನ್, ತಾ ಪಂ ಮುಖ್ಯ ಕಾರ್ಯ ನಿರ್ವಾಹಣಾದಿಕಾರಿ ಭವಾನಿ ಶಂಕರ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್, ಸಮಾಜ ಕಲ್ಯಾಣ ಇಲಾಖಾದಿಕಾರಿ ಧನಂಜಯ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಕಾಲೇಜು ವಿದ್ಯಾರ್ಥಿ ನಿಲಯದ ಲ್ಲಿ ಇದ್ದುಕೊಂಡು 2025 ರ ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಅಬಿನಂದಿಸಲಾಯಿತು. ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಮುರಳಿದರ ಸ್ವಾಗತಿಸಿ ತಾ ಪಂ ಸಂಯೋಜಕ ಜಯಾನಂದ್ ವಂದಿಸಿದರು. ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ, ಆಶಾಪೂರ್ಣಿಮ ಕಾರ್ಯಕ್ರಮ ನಿರೂಪಿಸಿದರು.