Home ರಾಜಕೀಯ ಸಮಾಚಾರ ಉಜಿರೆಯಲ್ಲಿ ಹೈ ಡ್ರಾಮಾ: ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

ಉಜಿರೆಯಲ್ಲಿ ಹೈ ಡ್ರಾಮಾ: ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

0

ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಪುನೀತ್ ಕೆರೆಹಳ್ಳಿ ಬರುತ್ತಿದ್ದ ವೇಳೆ ಬೆಳ್ತಂಗಡಿ ಪೊಲೀಸರು ಉಜಿರೆಯ ಕಾಲೇಜ್ ರಸ್ತೆಯಲ್ಲಿ ಅಡ್ಡಹಾಕಿ ದಕ್ಷಿಣ ಕನ್ನಡ ಪ್ರವೇಶ ನಿಷೇಧ ಮಾಡಿದ ಡಿಸಿ ಆದೇಶ ತೋರಿಸಿ ಹಿಂದಕ್ಕೆ ಕಳುಹಿಸಿದ್ದರೆ.
ಸೌಜನ್ಯ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರು ಹಾಗೂ ಪುನೀತ್ ಕೆರಹಳ್ಳಿ ಬೆಂಬಲಿಗರ ನಡುವೆ ಸಮಾಜಿಕ ಜಾಲತಾಣಗಳಲ್ಲಿ ಮತಿನ ಸಮರ ನಡೆದಿತ್ತು. ಪುನೀತ್ ಕೆರಹಳ್ಳಿ ಉಜಿರೆಗೆ ಬಂದರೆ ಗಲಭೆಯಾಗುವ ಸಾಧ್ಯತೆಯಿತ್ತು ಇದನ್ನು ಗಮನಿಸಿದ ಬೆಳ್ತಂಗಡಿ ಪೊಲೀಸರು ಪುನೀತ್ ಕೆರೆಹಳ್ಳಿಗೆ ಉಜಿರೆಗೆ ಪ್ರವೇಶ ನಿಷೇಧಿಸಿದ್ದರು. ಈ ಬಗ್ಗೆ ಜಿಲ್ಲಾಧಿಕಾರಿಯವರು ಅದೇಶ ಹೊರಡಿಸಿದ್ದರು
ಇಂದು ತನ್ನ ಬೆಂಬಲಿಗರೊಂದಿಗೆ ಆಗಮಿಸಿದ ಪುನೀತ್ ಕೆರಹಳ್ಳಿ ಅವರನ್ನು ಪೊಲೀಸರು ತಡೆದಿದ್ದರೆ ಈ ವೇಳೆ ಮಾತನ ಚಕಮಕಿ ನಡೆದಿದ್ದು ಬಳಿಕ ಪೊಲೀಸರು ಪುನೀತ್ ಹಾಗೂ ತಂಡವನ್ನು ಹಿಂದಕ್ಕೆ ಕಳುಹಿಸಿದ್ದರೆ.
ಪುನೀತ್ ಕೆರೆಹಳ್ಳಿ ಬರುವ ಮಾಹಿತಿ ತಿಳಿದು ಮಹೇಶ್ ಶೆಟ್ಟಿ ಬೆಂಬಲಿಗರು ಉಜಿರೆಯಲ್ಲಿ ಜಮಾಯಿಸಿದ್ದರು. ಪೊಲೀಸರು ಅತ್ಯಂತ ಚಾಣಾಕ್ಷತನದಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಪರಿಸ್ಥಿತಿ ನಿಭಾಯಿಸಿದ್ದಾರೆ

NO COMMENTS

LEAVE A REPLY

Please enter your comment!
Please enter your name here

Exit mobile version